ಬೆಂಗಳೂರು: ಕರ್ನಾಟಕದ ಬೆಂಗಳೂರಿನಲ್ಲಿ ಒಳ್ಳೆಯ ಸಂಬಳದ ಉದ್ಯೋಗ ಹುಡುಕುತ್ತಿರುವವರಿಗೆ ಶುಭ ಸಮಾಚಾರ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ (UIDAI Recruitment 2026) ಖಾಲಿ ಇರುವ 1 ಹುದ್ದೆಯ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಸಿಸ್ಟಂಟ್ ಅಕೌಂಟ್ ಆಫೀಸರ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ನೇಮಕಾತಿ ಸಂಸ್ಥೆ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ
ಒಟ್ಟು ಹುದ್ದೆಗಳು: 01
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಹುದ್ದೆಗಳ ಹೆಸರು: ಅಸಿಸ್ಟಂಟ್ ಅಕೌಂಟ್ ಆಫೀಸರ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 23
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ, ಎಂಬಿಎ ಅಥವಾ ಪಿಜಿಡಿಎಂ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 56 ವರ್ಷಗಳ ವಯೋಮಿತಿಯನ್ನು ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.51 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ ಎಂದು ಮಾಹಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ uidai.gov.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯನ್ನು ಆಯ್ಕೆ ಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು.



















