ಬಾಗಲಕೋಟೆ: ಅಣ್ಣ ಬುದ್ಧಿ ಹೇಳಿದ್ದಕ್ಕೆ ಆತನ ಮಗನನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ.
ಹುನಗುಂದ (Hungund) ತಾಲೂಕಿನ ಬೆನಕನವಾರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಂಗನವಾಡಿಗೆ (Anganwadi) ಹೊರಟಿದ್ದ ಮಗುವನ್ನು ಚಿಕ್ಕಪ್ಪನೇ ಎತ್ತಿಕೊಂಡು ಹೋಗಿ ಕತ್ತು ಸೀಳಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಆರೋಪಿಯನ್ನು ಭೀಮಪ್ಪ ಎಂದು ಗುರುತಿಸಲಾಗಿದೆ. ಹೆಂಡತಿ (Wife) ಮೇಲೆ ಹಲ್ಲೆ ಮಾಡಬೇಡ ಎಂದು ಭೀಮಪ್ಪನಿಗೆ ಆತನ ಸಹೋದರ ಮಾರುತಿ ಬುದ್ಧಿ ಹೇಳಿದ್ದರು ಎನ್ನಲಾಗಿದೆ. ಇದರಿಂದ ಕೋಪಗೊಂಡ ಭೀಮಪ್ಪ, ಮಾರುತಿ ಅವರ ಪುತ್ರನನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ.