ರಾಯಚೂರು: ರಾಯಚೂರಿನಲ್ಲಿ ಮೂರನೇ ದಿನವೂ ಉಪಲೋಕಾಯುಕ್ತರ ಅನಿರೀಕ್ಷಿತ ಭೇಟಿ ಮುಂದುವರಿದಿದೆ. ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸ್ಟೋನ್ ಕ್ರಷರ್ ಗೆ ಉಪಲೋಕಾಯುಕ್ತ ನ್ಯಾ. ಬಿ.ವೀರಪ್ಪ ಅವರು ಅನಿರೀಕ್ಷಿತವಾಗಿ ಭೇಟಿ ನೀಡಿದ್ದಾರೆ.
ಭೇಟಿಯ ಬಳಿಕ ಅಕ್ರಮವಾಗಿ ಕಲ್ಲು ಕ್ವಾರಿ ಕೊರೆದಿರುವುದು ಬೆಳಕಿಗೆ ಬಂದಿದೆ. ಸಂಪೂರ್ಣವಾಗಿ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಕಾನೂನು ಪ್ರಕಾರ ನಡೆಸಿದರೆ ನಾವು ಇಲ್ಲಿ ಬರುವುದಿಲ್ಲ ಇಲ್ಲಿನ ವ್ಯವಸ್ಥೆ ನೋಡಿದರೆ ಸಂಪೂರ್ಣ ಹದಗೆಟ್ಟಿದ್ದು, ಸಂಪೂರ್ಣ ಕಾನೂನು ಉಲ್ಲಂಘನೆಯಾಗಿರುವುದು ಗಮನಕ್ಕೆ ಬರುತ್ತಿದೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.
ಮಾಲೀಕರು ಮತ್ತು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಿದ್ದು, ಸದ್ಯ ಯಾರ ಮೇಲೆ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳುವುದಿಲ್ಲ ತನಿಖೆ ಮಾಡಿಸುತ್ತೇನೆ. ಯಾರನ್ನೂ ಬಿಡುವುದಿಲ್ಲ ಎಂದು ಉಪಲೋಕಾಯುಕ್ತರು ಎಚ್ಚರಿಕೆ ನೀಡಿದ್ದಾರೆ.