ವಿಜಯನಗರ : ಜಿಲ್ಲೆಯ ಹೊಸಪೇಟೆಯ ಸಂಡೂರು ರಸ್ತೆಯಲ್ಲಿರುವ HLC ಕಾಲುವೆಯಲ್ಲಿ ಅನಾಮಧೇಯ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಕಾಲುವೆಯಲ್ಲಿ ಶವ ಪತ್ತೆಯಾದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು, ಶವ ನೋಡಲು ಜನರು ಮುಗಿಬಿದ್ದ ಪರಿಣಾಮ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿದೆ. ಸ್ಥಳದಲ್ಲಿ ಉಂಟಾದ ಜನದಟ್ಟಣೆಯಿಂದ ಸಂಚಾರ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ.

ಮೃತ ವ್ಯಕ್ತಿ ಕಾಲು ಜಾರಿ ಕಾಲುವೆಗೆ ಬಿದ್ದು ಮೃತಪಟ್ಟಿದ್ದಾನೆಯೇ ಅಥವಾ ಇದೊಂದು ಕೊಲೆ ಪ್ರಕರಣವೇ ಎಂಬುದು ಇನ್ನಷ್ಟೇ ತನಿಖೆಯಿಂದ ತಿಳಿದುಬರಬೇಕಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ನಗರಸಭೆ ಸಿಬ್ಬಂದಿ ಮೃತದೇಹವನ್ನು ಕಾಲುವೆಯಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಇದನ್ನೂ ಓದಿ : ಮಂತ್ರಾಲಯದ ಬಳಿ ಭೀಕರ ಅಪಘಾತ ; ಮಂಗಳೂರು ಮೂಲದ ಉದ್ಯಮಿ ಸ್ಥಳದಲ್ಲೇ ಸಾವು!


















