ಬೆಂಗಳೂರು: ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ವಿರುದ್ಧ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನ ಹೊರಹಾಕಿದ್ದಾರೆ.
ಯು.ಟಿ. ಖಾದರ್ ಅವರಿಗೆ ಪತ್ರ ಬರೆದಿರುವ ಹೊರಟ್ಟಿ, ‘ಯಾವುದೇ ಕಾರ್ಯಕ್ರಮ ನಡೆದರೂ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿದ್ದೀರಿ. ಪುಸ್ತಕ ಮೇಳ, ಲೇಸರ್ ಲೈಟ್ ಅಳವಡಿಕೆ ಬಗ್ಗೆ ನನ್ನ ಅಭಿಪ್ರಾಯ ಪಡೆಯುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
`ಸಿಪಿಎ ಕಾಮನ್ ವೆಲ್ತ್ ಸಮ್ಮೇಳನ ಆಯೋಜನೆಯ ರೂಪುರೇಷೆಗೂ ನಮ್ಮ ಅಭಿಪ್ರಾಯ ಕೇಳಿಲ್ಲ. ಯಾವುದೇ ಕಾರ್ಯಕ್ರಮ ನಡೆದರೂ ಮುಂಚೆಯೇ ಏನೂ ಹೇಳುವುದಿಲ್ಲ. ಇವೆಲ್ಲವನ್ನೂ ಇಲ್ಲಿಯವರೆಗೆ ಸಹಿಸಿಕೊಂಡು ಬಂದಿದ್ದೇನೆ. ಇನ್ನು ಮುಂದೆ ಹೀಗೆ ಆಗುವುದಿಲ್ಲ ಎಂದು ಭಾವಿಸುತ್ತೇನೆಂದು’ ಎಂದು ಹೊರಟ್ಟಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಭಾಸವಾಗುತ್ತಿದೆ. ನಿಮಗೆ ಅನುಕೂಲವಾಗುವ ರೀತಿ ಕಾರ್ಯಕ್ರಮವನ್ನು ನಿರೂಪಿಸಿ ಒತ್ತಾಯ ಪೂರ್ವಕವಾಗಿ ನಾನು ಅದರಲ್ಲಿ ಭಾಗವಹಿಸುವಂತೆ ಮಾಡುವ ಸಂದಿಗ್ಧತೆಯ ಅವಶ್ಯಕತೆ ಎನು ಎನ್ನುವುದು ನನಗೆ ಒಗಟಾಗಿದೆ ಎಂದು ಸುದೀರ್ಘ ಪತ್ರದಲ್ಲಿ ಬೇಸರ ಹೇಳಿಕೊಂಡಿದ್ದಾರೆ.