ಬೆಂಗಳೂರು: ನೀವೇನಾದರೂ ಮೈಸೂರಿನವರಾಗಿದ್ದು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ದೊರೆತಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (Union Bank Recruitment 2026) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ಈ ಕೆಳಗಿನಂತಿದೆ. ಅರ್ಜಿ ಸಲ್ಲಿಸಲು ಜನವರಿ 12 ಕೊನೆಯ ದಿನವಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆ ಹೆಸರು: ಮೆಡಿಕಲ್ ಪ್ರಾಕ್ಟಿಷನರ್
ಒಟ್ಟು ಹುದ್ದೆ: ವಿವಿಧ
ಉದ್ಯೋಗ ಸ್ಥಳ: ಮೈಸೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ವೈದ್ಯಕೀಯ ಶಿಕ್ಷಣ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅಧಿಸೂಚನೆಯಲ್ಲಿ ತಿಳಿಸಿದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ unionbankofindia.co.in ಗೆ ಭೇಟಿ ನೀಡಬೇಕು
- ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
- ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
- ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
_ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ hr.romysuru@unionbankofindia.bank.in ಇ-ಮೇಲ್ ವಿಳಾಸಕ್ಕೆ ಕಳುಹಿಸಬೇಕು.
ಇದನ್ನೂ ಓದಿ : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 30 ಹುದ್ದೆಗಳ ನೇಮಕಾತಿ: 2.08 ಲಕ್ಷ ರೂ. ಸಂಬಳ



















