ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದೆ. ಮಧ್ಯಾಹ್ನ ಒಂದು ಗಂಟೆಗೆ ಸೇವಾತೀರ್ಥದಲ್ಲಿ ಈ ಮಹತ್ವದ ಸಭೆ ನಿಗದಿಯಾಗಿದ್ದು, ಇಂದಿನ ಸಂಪುಟ ಸಭೆಯಲ್ಲಿ ಎರಡು ಪ್ರಮುಖ ಮಸೂದೆಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ.
ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ತಿದ್ದುಪಡಿ ಮಸೂದೆ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಯಲಿದೆ. ಇದರೊಂದಿಗೆ, ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದ ತಿದ್ದುಪಡಿಗಳ ಬಗ್ಗೆಯೂ ಸಂಪುಟ ಸಭೆಯಲ್ಲಿ ಚರ್ಚಿಸುವ ನಿರೀಕ್ಷೆಯಿದೆ.


















