ಬೆಂಗಳೂರು: ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಶನಿವಾರ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ವಿಚಾರಣೆಗೆ ಗೈರಾಗಿದ್ದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ವಿರುದ್ಧ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ಹೀಗಾಗಿ ಮುಂದಿನ ವಿಚಾರಣೆಗೆ ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಿತ್ತು. ಹೀಗಾಗಿ ಶನಿವಾರ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಕುಮಾರಸ್ವಾಮಿ ತಮ್ಮ ವಕೀಲರೊಂದಿಗೆ ಹಾಜರಾಗಿ ವಿಚಾರಣೆ ಎದುರಿಸಿದರು.
ಬನಶಂಕರಿ 5ನೇ ಹಂತದ ಹಲಗೆವಡೇರಹಳ್ಳಿಯ 3 ಎಕರೆ 34 ಗುಂಟೆ ಜಮೀನು ಡಿನೋಟಿಫಿಕೇಶನ್ ಮಾಡಿರುವ ಆರೋಪ ಕುಮಾರಸ್ವಾಮಿ ಮೇಲಿದೆ.