ಬೆಂಗಳೂರು: ಕೇತಗಾನಹಳ್ಳಿ (kethaganahalli) ಸರ್ಕಾರಿ ಭೂಮಿ ಒತ್ತುವರಿ ತೆರವು ಪ್ರಕರಣಕ್ಕೆ ಸಂಬಂಧಇಸಿದಂತೆ ತಹಶೀಲ್ದಾರ್ ನೀಡಿರುವ ನೋಟಿಸ್ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೈಕೋರ್ಟ್ (Karnataka high Court)ಮೆಟ್ಟಿಲೇರಿದ್ದಾರೆ.
ದಾಖಲೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಎಎಜಿ ಕಿರಣ್ ರೋಣ್ ಮನವಿ ಮಾಡಿದರು. ಕೋರ್ಟ್, ಮಾರ್ಚ್ 27ರವರೆಗೂ ಬಲವಂತದ ಕ್ರಮ ಕೈಗೊಳ್ಳುವುದಿಲ್ಲವೆಂದು ಹೇಳಿಕೆ ದಾಖಲಿಸಿಕೊಂಡು ವಿಚಾರಣೆಯನ್ನು ಮಾರ್ಚ್ 27ಕ್ಕೆ ನಿಗದಿಪಡಿಸಿದೆ. 6 ಎಕರೆ ಒತ್ತುವರಿ ಕುರಿತಂತೆ ನೋಟಿಸ್ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎನ್.ಎಸ್. ಸಂಜಯಗೌಡ ಅವರಿದ್ದ ಹೈಕೋರ್ಟ್ ಪೀಠ ವಿಚಾರಣೆ ನಡೆಸಿದ್ದು, ಕುಮಾರಸ್ವಾಮಿ ಪರ ಹಿರಿಯ ವಕೀಲ ಉದಯ್ ಹೊಳ್ಳ ಹಾಗೂ ಎ.ವಿ.ನಿಶಾಂತ್ ವಾದ ಮಂಡಿಸಿದ್ದಾರೆ.
ಕರ್ನಾಟಕ ಭೂ ಕಂದಾಯ ಅಧಿನಿಯಮ 1964ರ ಕಲಂ 104ರಡಿ ಒತ್ತುವರಿ ತೆರವು ನೋಟಿಸ್‌ಗಳನ್ನು ಎಚ್‌ಡಿ ಕುಮಾರಸ್ವಾಮಿ ಸೇರಿದಂತೆ 11 ಜನ ಭೂ ಮಾಲೀಕರಿಗೆ ಜಾರಿ ಮಾಡಲಾಗಿದ್ದು, ”ಏಳು ದಿನಗಳ ಗಡುವಿನೊಳಗೆ ಉತ್ತರ ನೀಡಬೇಕು. ಉತ್ತರ ನೀಡಲು ವಿಫಲರಾದಲ್ಲಿ ಕಾನೂನು ಪ್ರಕಾರ ತೆರವು ಕಾರ್ಯಾಚರಣೆ ಹಾಗೂ ದಂಡ ವಿಧಿಸಲಾಗುವುದು ಎಂದು ನೋಟಿಸ್ ನಲ್ಲಿ ತಿಳಿಸಲಾಗಿತ್ತು.