ಲಕ್ನೋ: ದೇಶದ ಜನರ ಗಮನ ಸೆಳೆದಿರುವ ಅಮೇಥಿ ಲೋಕಸಭಾ ಕ್ಷೇತ್ರದಿಂದ (Amethi Loksabha constituency) ಎರಡು ಬಾರಿ ಆಯ್ಕೆಯಾಗಿ ಕೇಂದ್ರ ಸಚಿವರಾಗಿದ್ದ ಸಚಿವೆ ಸ್ಮೃತಿ ಇರಾನಿಯನ್ನು ಮತದಾರರು ಕೈ ಬಿಟ್ಟಿದ್ದಾರೆ.
ಅಮೇಥಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸ್ಮೃತಿ ಇರಾನಿ (Smriti Irani) ಅವರಿಗಿಂತ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ 50,758 ಮತಗಳಿಂದ ಮುಂದೆ ಇದ್ದಾರೆ. ಕಾಂಗ್ರೆಸ್ ನ ಭದ್ರಕೋಟೆಯಾಗಿದ್ದ ಅಮೇಥಿಯಲ್ಲಿ ಸಚಿವೆ ಸ್ಮೃತಿ ಇರಾನಿ 2019 ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಿರುದ್ಧ ಗೆಲುವು ಕಂಡಿದ್ದರು.
ಸ್ಮೃತಿ ಇರಾನಿ ಅವರು ಗುಜರಾತ್‌ನಿಂದ 2011 ರಲ್ಲಿ ಮೊದಲ ಬಾರಿಗೆ ರಾಜ್ಯಸಭೆಗೆ ಪ್ರವೇಶಿಸಿದ್ದರು. ನಂತರ ಆಗಸ್ಟ್ 2017 ರಲ್ಲಿ ಮರು ಆಯ್ಕೆಯಾದರು. ಈಗ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಜವಳಿ ಖಾತೆ ಸಚಿವರಾಗಿದ್ದಾರೆ. ಮೇ 2014 ಮತ್ತು ಜುಲೈ 2016 ರ ನಡುವೆ ಅವರು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಜುಲೈ 2017 ರಿಂದ ಮೇ 2018 ರವರೆಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ನಿರ್ವಹಿಸಿದರು.