ತುಮಕೂರು: ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀಗಳ 63ನೇ ಜನ್ಮದಿನ ಹಿನ್ನಲೆ ಕೇಂದ್ರ ಸಚಿವ ವಿ. ಸೋಮಣ್ಣ ಹಾಗೂ ಅವರ ಪತ್ನಿ ಶೈಲಜಾ ಸೋಮಣ್ಣ ಮಠಕ್ಕೆ ಭೇಟಿ ನೀಡಿದ್ದಾರೆ.
ಸಿದ್ದಗಂಗಾ ಮಠದಲ್ಲಿರುವ ಶಿವಕುಮಾರ ಶ್ರೀಗಳ ಗದ್ದುಗೆಗೆ ಮೊದಲು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸಿದ್ದಲಿಂಗ ಶ್ರೀಗಳ ಆಶಿರ್ವಾದ ಪಡೆದುಕೊಂಡರು.
ಈ ಸಂಧರ್ಭದಲ್ಲಿ ತುಮಕೂರು ನಗರ ಶಾಸಕ ಜಿ.ಬಿ ಜ್ಯೋತಿಗಣೇಶ್ ಸೇರಿದಂತೆ ಹಲವರು ಸಾಥ್ ನೀಡಿದರು.



















