ಉಡುಪಿ: ಸರ್ದಾರ್ ವಲ್ಲಬಾಯಿ ಪಟೇಲ್ ಅವರ 150 ನೇ ಜನ್ಮ ದಿನದ ಅಂಗವಾಗಿ ನ. 11 ರಂದು ಏಕತಾ ನಡಿಗೆ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.
ಏಕತಾ ನಡಿಗೆ ಕಾರ್ಯಕ್ರಮವು ನ. 11 ರಂದು ನಗರದ ಬೋರ್ಡ್ ಹೈಸ್ಕೂಲ್ ನಿಂದ ಅಜ್ಜರಕಾಡು ಭುಜಂಗ ಪಾರ್ಕಿನ ಹುತಾತ್ಮರ
ಯುದ್ಧ ಸ್ಮಾರಕದವರೆಗ ನಡೆಯಲಿದ್ದು, ಅಂದು ಬೆಳಗ್ಗೆ 7.30 ಕ್ಕೆ ಬೋರ್ಡ್ ಹೈಸ್ಕೂಲ್ ಆವರಣದಲ್ಲಿ ಏಕತಾ ನಡಿಗೆ ಜಾಥಾಗೆ ಚಾಲನೆ
ನೀಡಲಾಗುವುದು. ನಂತರ ಜಾಥಾ ಸಮಾರೋಪಗೊಳ್ಳುವ ಭುಜಂಗ ಪಾರ್ಕಿನ ಗಾಂಧಿಕಟ್ಟೆಯಲ್ಲಿ ಸರ್ದಾರ್ ವಲ್ಲಬಾಯಿ ಪಟೇಲ್ ಅವರ ಜೀವನ
ಸಾಧನೆ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
ಏಕತಾ ನಡಿಗೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು, ಎನ್.ಎಸ್.ಎಸ್.ಎನ್.ಸಿ.ಸಿ ಸ್ವಯಂ ಸೇವಕರುಗಳು, ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು, ಸಂಘ-ಸಂಸ್ಥೆಗಳು, ಯುವಕ-ಯುವತಿ ಮಂಡಳಗಳು, ಮಾಜಿ ಸೈನಿಕರು ಸೇರಿದಂತೆ ಮತ್ತಿತರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರೊಂದಿಗೆ ಕಾಲ್ನಡಿಗೆ ಜಾಥಾವನ್ನು ಯಶಸ್ವಿಗೊಳಿಸುವಲ್ಲಿ ಸಹಕರಿಬೇಕು ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಕರೆ ನೀಡಿದ್ದಾರೆ.
ಇದನ್ನೂ ಓದಿ:ಇಂದಿನಿಂದ ಮಲ್ಲೇಶ್ವರಂನಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಆರಂಭ



















