ಬೆಂಗಳೂರು ಗ್ರಾಮಾಂತರ: ಬೆಂಗಳೂರು ಹೊರವಲಯದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿರುವ ಆರೋಪ ಕೇಳಿ ಬಂದಿದ್ದು, ಪ್ರಜ್ಞಾವಂತರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ದಲಿತ ಸಮುದಾಯದವರಿಗೆ ದೇವಾಲಯಕ್ಕೆ ಹೋಗಲು ನಿರಾಕರಿಸಿರುವ ಘಟನೆಯೊಂದು ವರದಿಯಾಗಿದೆ. ದೊಡ್ಡಬಳ್ಳಾಪುರದ ಗೂಳ್ಯ ಗ್ರಾಮದಲ್ಲಿ ಈ ಅನಿಷ್ಟ ಪದ್ದತಿ ಇನ್ನೂ ಜೀವಂತವಾಗಿದೆ ಎನ್ನಲಾಗಿದೆ. ದೂರು ಬಂದ ಹಿನ್ನಲೆಯಲ್ಲಿ ಗ್ರಾಮಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಜನರ ಮನವೊಲಿಸಿ, ತಿಳುವಳಿಕೆ ಮೂಡಿಸುತ್ತಿದ್ದಾರೆ.
ತಹಸೀಲ್ದಾರ್ ವಿಭಾ ವಿದ್ಯಾ ರಾಥೋಡ್ ಮತ್ತು ಡಿವೈಎಸ್ಪಿ ರವಿ. ಇನ್ ಸ್ಪೆಕ್ಟರ್ ಸಾಧಿಕ್ ಪಾಷಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಗ್ರಾಮದಲ್ಲಿ ಶಾಂತಿ ಸಭೆ ನಡೆಸಿದ್ದಾರೆ. ದಲಿತರಿಗೆ ದೇವಾಲಯಕ್ಕೆ ಪ್ರವೇಶ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಮನವೊಲಿಸಿದ್ದಾರೆ.
ಸಭೆಯಲ್ಲಿ ಗ್ರಾಮದ ಓರ್ವ ಮಹಿಳೆ ಅಬಕಾರಿ ಇಲಾಖೆಗೆ ದೂರು ಸಲ್ಲಿಸಿದ್ದಾರೆ. ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ಜೊತೆಗೆ ಅನಿಷ್ಟ ಪದ್ಧತಿ ಜೀವಂತ ಇದೆ ಎಂದು ದೂರಿದ್ದಾರೆ.