ಬೆಂಗಳೂರು: ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಭೀಕರ ಘಟನೆ ನಾಯಂಡಹಳ್ಳಿ ಬಳಿಯ ಅಂಬೇಡ್ಕರ್ ಕಾಲೋನಿಯಲ್ಲಿ ನಡೆದಿದೆ.
ಕೊಲೆಯಾದ ಯುವಕನನ್ನು ಗುಣ (28) ಎಂದು ಗುರುತಿಸಲಾಗಿದೆ. ಇಂದು ರಾತ್ರಿ ಸುಮಾರು 9 ಗಂಟೆ ಸುಮಾರಿಗೆ ಗುಣ ಹಾಗೂ ಅಕ್ಕಪಕ್ಕದ ಮನೆಯವರ ನಡುವೆ ಗಾಡಿ ನಿಲ್ಲಿಸುವ ವಿಚಾರಕ್ಕೆ ಗಲಾಟೆ ನಡೆದಿದೆ. ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡು, ಆರೋಪಿಗಳು ಚಾಕುವಿನಿಂದ ಇರಿದು ಗುಣನನ್ನು ಕೊಲೆ ಮಾಡಿದ್ದಾರೆ.
ಗಂಭೀರ ಗಾಯಗೊಂಡ ಗುಣ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಘಟನೆ ಮಾಹಿತಿ ಪಡೆದ ತಕ್ಷಣ ಬ್ಯಾಟರಾಯನಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ : ಏರ್ಪೋರ್ಟ್ ರಸ್ತೆಯಲ್ಲಿ ಅಪಘಾತ ಹೆಚ್ಚಳ | ಜಾಗೃತಿ ಮೂಡಿಸಲು ಬಂದ ಯಮರಾಜ



















