ಬೆಂಗಳೂರು: ಸರ್ಕಾರಿ ಹುದ್ದೆಗಳ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಲಭಿಸಿದೆ. ಕೇಂದ್ರ ಲೋಕಸೇವಾ ಆಯೋಗವು 213 ಹುದ್ದೆಗಳ ನೇಮಕಾತಿಗಾಗಿ (UPSC Recruitment 2025) ಅಧಿಸೂಚನೆ ಹೊರಡಿಸಿದೆ. ಒಟ್ಟು 213 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅಕ್ಟೋಬರ್ 02 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹಾಗಾದ್ರೆ, ಹೇಗೆ ಅರ್ಜಿ ಸಲ್ಲಿಸಬೇಕು? ಯಾವ ವಿದ್ಯಾರ್ಹತೆ ಏನು ಎಂಬುದರ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕೇಂದ್ರ ಲೋಕಸೇವಾ ಆಯೋಗ
ಹುದ್ದೆಗಳು: 213
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 02
ಉದ್ಯೋಗ ಸ್ಥಳ: ದೇಶಾದ್ಯಂತ
ಲೆಕ್ಚರರ್ ಹಾಗೂ ಮೆಡಿಕಲ್ ಆಫೀಸರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಒಬಿಸಿಯವರಿಗೆ ವಯೋಮಿತಿ ವಿನಾಯಿತಿ ಇದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ಸೈಟ್ upsc.gov.in ಗೆ ಭೇಟಿ ನೀಡಬೇಕು
ಯುಪಿಎಸ್ಸಿ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು



















