ಬೆಂಗಳೂರು: ಸರ್ಕಾರಿ ಹುದ್ದೆಗಳ ಆಕಾಂಕ್ಷಿಗಳಿಗೆ ಶುಭ ಸುದ್ದಿಯೊಂದು ಲಭಿಸಿದೆ. ಕೇಂದ್ರ ಲೋಕಸೇವಾ ಆಯೋಗವು ಅಸೋಸಿಯೇಟ್ ಡೈರೆಕ್ಟರ್ ಹುದ್ದೆಗಳ (UPSC Recruitment 2025) ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಒಟ್ಟು 45 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆಗಸ್ಟ್ 14 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹಾಗಾದ್ರೆ, ಹೇಗೆ ಅರ್ಜಿ ಸಲ್ಲಿಸಬೇಕು? ಯಾವ ವಿದ್ಯಾರ್ಹತೆ ಅವಶ್ಯಕತೆ ಇದೆ ಎಂಬುದರ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕೇಂದ್ರ ಲೋಕಸೇವಾ ಆಯೋಗ
ಹುದ್ದೆಗಳು: 45
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಆಗಸ್ಟ್ 14
ಉದ್ಯೋಗ ಸ್ಥಳ: ಶಹಜಹಾನ್ ರೋಡ್, ನವದೆಹಲಿ
ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಒಬಿಸಿಯವರಿಗೆ ಮೂರು ವರ್ಷಗಳ ವಯೋಮಿತಿ ವಿನಾಯಿತಿ ಇದೆ. ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಉಳಿದವರಿಗೆ 25 ರೂಪಾಯಿ ಶುಲ್ಕವಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ಸೈಟ್ upsconline.nic.inಗೆ ಭೇಟಿ ನೀಡಬೇಕು
ಯುಪಿಎಸ್ಸಿ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು