ಬೆಂಗಳೂರು : ಕೇಂದ್ರ ಸರ್ಕಾರದ ಹುದ್ದೆಗಳಿಗೆ ಪ್ರಯತ್ನ ನಡೆಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಕೇಂದ್ರ ಲೋಕಸೇವಾ ಆಯೋಗವು 34 ಹುದ್ದೆಗಳ (UPSC Recruitment 2026) ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಒಟ್ಟು 34 ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ, ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕೇಂದ್ರ ಲೋಕಸೇವಾ ಆಯೋಗ
ಹುದ್ದೆಗಳು: 34
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಆಗಸ್ಟ್ 28
ಉದ್ಯೋಗ ಸ್ಥಳ: ದೇಶಾದ್ಯಂತ
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್, ರಿಸರ್ಚ್ ಆಫೀಸರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ, ಬಿಎಸ್ಸಿ, ಎಂಎಸ್ಸಿ, ಎಲ್ ಎಲ್ ಎಂ ಕೋರ್ಸ್ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿದೆ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಒಬಿಸಿಯವರಿಗೆ ಮೂರು ವರ್ಷಗಳ ವಯೋಮಿತಿ ವಿನಾಯಿತಿ ಇದೆ. ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಉಳಿದವರಿಗೆ 25 ರೂಪಾಯಿ ಶುಲ್ಕವಿದೆ. ಲಿಖಿತ ಪರೀಕ್ಷೆ, ಫಿಸಿಕಲ್ ಟೆಸ್ಟ್, ಸಂದರ್ಶನ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.77 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ upsc.gov.in ಗೆ ಭೇಟಿ ನೀಡಬೇಕು
ಯುಪಿಎಸ್ಸಿ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕ
ನಿಮಗೆ ಬೇಕಾದ ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ : ‘ಶುದ್ಧ ಪೆಟ್ರೋಲ್ ನಿಮ್ಮಪ್ಪನ ಮನೆಯಿಂದ ಬರುತ್ತಾ?’ : ವಿವಾದ ಸೃಷ್ಟಿಸಿದ ಬಿಜೆಪಿ ಸಂಸದನ ಹೇಳಿಕೆ!


















