ಬೆಂಗಳೂರು: ಕೇಂದ್ರ ಸರ್ಕಾರಿ ಹುದ್ದೆಗಳ ಆಕಾಂಕ್ಷಿಗಳಿಗೆ ಶುಭ ಸುದ್ದಿಯೊಂದು ಲಭಿಸಿದೆ. ಕೇಂದ್ರ ಲೋಕಸೇವಾ ಆಯೋಗವು 538 ಹುದ್ದೆಗಳ (UPSC Recruitment 2026) ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಒಟ್ಟು 538 ಪ್ರೊಫೆಸರ್, ಸೈಂಟಿಸ್ಟ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹಾಗಾದ್ರೆ, ಹೇಗೆ ಅರ್ಜಿ ಸಲ್ಲಿಸಬೇಕು? ಯಾವ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ ಇದೆ ಎಂಬುದರ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕೇಂದ್ರ ಲೋಕಸೇವಾ ಆಯೋಗ
ಹುದ್ದೆಗಳು: 538
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜುಲೈ 3
ಉದ್ಯೋಗ ಸ್ಥಳ: ದೇಶಾದ್ಯಂತ
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ, ಬಿ.ಟೆಕ್, ಎಂಎಸ್ಸಿ, ಬಿಎಸ್ಸಿ, ಎಂ.ಟೆಕ್, ಪಿಎಚ್.ಡಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಒಬಿಸಿಯವರಿಗೆ ಮೂರು ವರ್ಷಗಳ ವಯೋಮಿತಿ ವಿನಾಯಿತಿ ಇದೆ. ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ಸಂದರ್ಶನ, ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ upsc.gov.in ಗೆ ಭೇಟಿ ನೀಡಬೇಕು
ಯುಪಿಎಸ್ಸಿ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು



















