ಬೆಂಗಳೂರು : ಕೇಂದ್ರ ಸರ್ಕಾರಿ ಹುದ್ದೆಗಳ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ದೊರೆತಿದೆ. ಕೇಂದ್ರ ಲೋಕಸೇವಾ ಆಯೋಗವು (UPSC Recruitment 2026) 845 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಕಂಬೈನ್ಡ್ ಡಿಫೆನ್ಸ್ ಸರ್ವಿಸಸ್ ಎಕ್ಸಾಮಿನೇಷನ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೇಗೆ ಅರ್ಜಿ ಸಲ್ಲಿಸಬೇಕು? ವಿದ್ಯಾರ್ಹತೆ ಏನು ಎಂಬುದು ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕೇಂದ್ರ ಲೋಕಸೇವಾ ಆಯೋಗ
ಹುದ್ದೆಗಳು: 845
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜೂನ್ 9
ಉದ್ಯೋಗ ಸ್ಥಳ: ದೇಶಾದ್ಯಂತ
ಇಂಡಿಯನ್ ಮಿಲಿಟರಿ ಅಕಾಡೆಮಿ, ಏರ್ ಫೋರ್ಸ್ ಅಕಾಡೆಮಿ, ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಸೇರಿ ಹಲವು ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಗ್ರಿ, ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಗರಿಷ್ಠ 24 ವರ್ಷಗಳ ವಯೋಮಿತಿಯನ್ನು ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿದೆ.
ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಉಳಿದವರಿಗೆ 200 ರೂಪಾಯಿ ಶುಲ್ಕವಿದೆ. ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ, ವೈದ್ಯಕೀಯ ತಪಾಸಣೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 2.25 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ಸೈಟ್ upsc.gov.in ಗೆ ಭೇಟಿ ನೀಡಬೇಕು
ಯುಪಿಎಸ್ಸಿ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ : 98 ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ



















