ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಇರಾನ್‌ನ ‘ಕ್ರೌನ್ ಜ್ಯುವೆಲ್’ ಖಾರ್ಗ್ ದ್ವೀಪದ ಮೇಲೆ ಅಮೆರಿಕದ ಭೀಕರ ದಾಳಿ : ಸೇನಾ ನೆಲೆಗಳು ಸಂಪೂರ್ಣ ಧ್ವಂಸ

March 14, 2026
Share on WhatsappShare on FacebookShare on Twitter

ವಾಷಿಂಗ್ಟನ್: ಅಮೆರಿಕ-ಇರಾನ್ ಯುದ್ಧ ತಾರಕಕ್ಕೇರಿದ್ದು, ಇರಾನ್‌ನ ಪ್ರಮುಖ ತೈಲ ಕೇಂದ್ರವಾಗಿರುವ ‘ಖಾರ್ಗ್ ದ್ವೀಪ’ದ (Kharg Island) ಮೇಲಿನ ಸೇನಾ ನೆಲೆಗಳ ಮೇಲೆ ಅಮೆರಿಕ ಭೀಕರ ಬಾಂಬ್ ದಾಳಿ ನಡೆಸಿದೆ. ಈ ದಾಳಿಯಲ್ಲಿ ಇರಾನ್‌ನ ಸೇನಾ ನೆಲೆಗಳು ಸಂಪೂರ್ಣವಾಗಿ ಧ್ವಂಸಗೊಂಡಿವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಅಲ್ಲದೆ, ಜಾಗತಿಕ ತೈಲ ಪೂರೈಕೆಗೆ ನಿರ್ಣಾಯಕವಾಗಿರುವ ಹೊರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ವಾಣಿಜ್ಯ ಮತ್ತು ತೈಲ ಹಡಗುಗಳಿಗೆ ಅಮೆರಿಕ ನೌಕಾಪಡೆಯು ಶೀಘ್ರದಲ್ಲೇ ಭದ್ರತೆ ಒದಗಿಸಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇರಾನ್‌ನ ಶೇಕಡಾ 90ರಷ್ಟು ಕಚ್ಚಾ ತೈಲ ರಫ್ತು ನಿರ್ವಹಿಸುವ ಈ ಖಾರ್ಗ್ ದ್ವೀಪವನ್ನು ಇರಾನ್‌ನ ಆರ್ಥಿಕತೆಯ ‘ಕ್ರೌನ್ ಜ್ಯುವೆಲ್’ ಎಂದೇ ಪರಿಗಣಿಸಲಾಗಿದೆ. ತಮ್ಮ ‘ಟ್ರುತ್ ಸೋಶಿಯಲ್’ (Truth Social) ಖಾತೆಯಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಟ್ರಂಪ್, ಮಧ್ಯಪ್ರಾಚ್ಯದ ಇತಿಹಾಸದಲ್ಲೇ ಅತ್ಯಂತ ಪ್ರಬಲವಾದ ಬಾಂಬ್ ದಾಳಿಯ ಮೂಲಕ ಸೇನಾ ಗುರಿಗಳನ್ನು ನಾಶಪಡಿಸಲಾಗಿದೆ ಎಂದಿದ್ದಾರೆ. ಸದ್ಯಕ್ಕೆ ಮಾನವೀಯತೆಯ ದೃಷ್ಟಿಯಿಂದ ದ್ವೀಪದ ತೈಲ ಮೂಲಸೌಕರ್ಯಗಳನ್ನು ಗುರಿಯಾಗಿಸಿಲ್ಲ. ಆದರೆ, ಹೊರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಮುಕ್ತ ಮತ್ತು ಸುರಕ್ಷಿತ ಸಂಚಾರಕ್ಕೆ ಇರಾನ್ ಅಥವಾ ಬೇರೆ ಯಾರಾದರೂ ಅಡ್ಡಿಪಡಿಸಿದರೆ, ಈ ನಿರ್ಧಾರವನ್ನು ಕ್ಷಣಮಾತ್ರದಲ್ಲಿ ಮರುಪರಿಶೀಲಿಸುವುದಾಗಿ ಅವರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಅಮೆರಿಕದ ದಾಳಿಯನ್ನು ಎದುರಿಸುವ ಅಥವಾ ಜಗತ್ತಿಗೆ ಬೆದರಿಕೆ ಒಡ್ಡುವ ಯಾವುದೇ ಸಾಮರ್ಥ್ಯ ಇನ್ನು ಮುಂದೆ ಇರಾನ್‌ಗೆ ಉಳಿದಿಲ್ಲ ಎಂದು ಟ್ರಂಪ್ ಗುಡುಗಿದ್ದಾರೆ.

ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ

ಯುದ್ಧದ ಪರಿಣಾಮವಾಗಿ ಈಗಾಗಲೇ ಜಾಗತಿಕ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲ-ಕಲ್ಲೋಲ ಸೃಷ್ಟಿಯಾಗಿದೆ. ಕಚ್ಚಾ ತೈಲದ ಬೆಲೆಗಳು ಗಗನಕ್ಕೇರಿದ್ದು, ಬ್ರೆಂಟ್ ಕಚ್ಚಾ ತೈಲದ ದರ ಶೇ.42ರಷ್ಟು ಜಿಗಿದು ಪ್ರತಿ ಬ್ಯಾರೆಲ್‌ಗೆ 100 ಡಾಲರ್ ಗಡಿ ದಾಟಿವೆ. ಇದು ಜಗತ್ತಿನಾದ್ಯಂತ ಹಣದುಬ್ಬರ ಮತ್ತು ಇಂಧನ ಪೂರೈಕೆಯ ಆತಂಕವನ್ನು ಹೆಚ್ಚಿಸಿದೆ. ಇರಾನ್‌ನ ಸತತ ದಾಳಿಗಳಿಂದಾಗಿ, ಜಾಗತಿಕ ಕಚ್ಚಾ ತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲದ (LNG) ಐದನೇ ಒಂದು ಭಾಗ ಹಾದುಹೋಗುವ ಹೊರ್ಮುಜ್ ಜಲಸಂಧಿಯಲ್ಲಿ ಕಡಲ ಸಂಚಾರ ಬಹುತೇಕ ಸ್ಥಗಿತಗೊಂಡಿದೆ. ಈ ಬಿಕ್ಕಟ್ಟನ್ನು ಶಮನಗೊಳಿಸಲು ಅಮೆರಿಕದ ನೌಕಾಪಡೆಯು ಶೀಘ್ರದಲ್ಲೇ ತೈಲ ಟ್ಯಾಂಕರ್‌ಗಳಿಗೆ ಬೆಂಗಾವಲಾಗಿ ನಿಲ್ಲಲಿದೆ ಎಂದು ರಕ್ಷಣಾ ಇಲಾಖೆ ತಿಳಿಸಿದೆ.

ಲೆಬನಾನ್‌ನಲ್ಲಿ ಉಲ್ಬಣಗೊಂಡ ಸಂಘರ್ಷ

ಅಮೆರಿಕದ ಬಾಂಬ್ ದಾಳಿ ತೀವ್ರಗೊಳ್ಳುತ್ತಿದ್ದಂತೆಯೇ, ವಿಚಲಿತಗೊಂಡಿರುವ ಇರಾನ್, ಇಸ್ರೇಲ್ ಹಾಗೂ ತನ್ನ ಕೊಲ್ಲಿ ನೆರೆಹೊರೆಯ ರಾಷ್ಟ್ರಗಳಾದ ಕತಾರ್ ಮತ್ತು ಸೌದಿ ಅರೇಬಿಯಾದತ್ತ ಹೊಸ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳನ್ನು ಆರಂಭಿಸಿದೆ. ಈ ಕ್ಷಿಪಣಿಗಳನ್ನು ಮಿತ್ರಪಡೆಗಳು ಮತ್ತು ನ್ಯಾಟೋ ಪಡೆಗಳು ಮಾರ್ಗಮಧ್ಯೆ ಹೊಡೆದುರುಳಿಸಿವೆ. ಇನ್ನೊಂದೆಡೆ, ಇಸ್ರೇಲ್ ಮತ್ತು ಲೆಬನಾನ್‌ನ ಹೆಜ್ಬೊಲ್ಲಾ ನಡುವಿನ ಯುದ್ಧವೂ ಭೀಕರ ಸ್ವರೂಪ ಪಡೆದುಕೊಂಡಿದೆ. ದಕ್ಷಿಣ ಲೆಬನಾನ್‌ನ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 12 ವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಹೆಜ್ಬೊಲ್ಲಾವನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಇಸ್ರೇಲ್ ನಡೆಸುತ್ತಿರುವ ಸರಣಿ ದಾಳಿಗಳಿಗೆ ಲೆಬನಾನ್‌ನಲ್ಲಿ ಈವರೆಗೆ 773 ಜನರು ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.

ಖಮೇನಿ ಪುತ್ರನ ಬಗ್ಗೆ ಮಾಹಿತಿಗೆ 10 ಮಿಲಿಯನ್ ಡಾಲರ್ ಬಹುಮಾನ

ಕಳೆದ ಎರಡು ವಾರಗಳಲ್ಲಿ ಅಮೆರಿಕ ಮತ್ತು ಇಸ್ರೇಲ್ ಪಡೆಗಳು ಇರಾನ್‌ನ 15,000 ಕ್ಕೂ ಹೆಚ್ಚು ಗುರಿಗಳ ಮೇಲೆ ದಾಳಿ ನಡೆಸಿವೆ ಎಂದು ಪೆಂಟಗನ್ ತಿಳಿಸಿದೆ. ಪರಿಸ್ಥಿತಿಯನ್ನು ನಿಭಾಯಿಸಲು ಅಮೆರಿಕವು ಜಪಾನ್‌ ಮೂಲದ ‘ಯುಎಸ್‌ಎಸ್‌ ಟ್ರಿಪೋಲಿ’ ಯುದ್ಧನೌಕೆಯ ಜೊತೆಗೆ 2,500 ನೌಕಾಪಡೆಯ ಯೋಧರನ್ನು ಮಧ್ಯಪ್ರಾಚ್ಯಕ್ಕೆ ರವಾನಿಸಿದೆ. ಫೆ.28 ರಂದು ಇಸ್ರೇಲ್-ಅಮೆರಿಕದ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಹತ್ಯೆಯಾದ ಬಳಿಕ, ಅವರ ಪುತ್ರ ಮೊಜ್ತಬಾ ಖಮೇನಿಯನ್ನು ಹೊಸ ನಾಯಕನನ್ನಾಗಿ ಹೆಸರಿಸಲಾಗಿತ್ತು. ಆದರೆ, ಅವರು ಗಾಯಗೊಂಡಿದ್ದು ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಂಡಿಲ್ಲ. ಮೊಜ್ತಬಾ ಎಲ್ಲಿದ್ದಾರೆಂಬ ಬಗ್ಗೆ ಮಾಹಿತಿ ನೀಡಿದವರಿಗೆ ಅಮೆರಿಕ ಸರ್ಕಾರ 10 ಮಿಲಿಯನ್ ಡಾಲರ್ ಬಹುಮಾನವನ್ನೂ ಘೋಷಿಸಿದೆ.

ಇದನ್ನೂ ಓದಿ : ಇಂದಿರಾ ಕ್ಯಾಟೀನ್‌ಗೆ ಗ್ಯಾಸ್‌ ಪೂರೈಕೆ ಮಾಡಲು ಗ್ರೀನ್‌ ಸಿಗ್ನಲ್‌

Tags: Karnataka News beatMilitary bases completely destroyedUS strikes Iran's 'crown jewel' Kharg Island
SendShareTweet
Previous Post

ಗೂಗಲ್ ಕಂಪನಿಯಿಂದ 10 ಲಕ್ಷ ರೂ. ಫೆಲೋಶಿಪ್ ಗೆ ಅರ್ಜಿ ಆಹ್ವಾನ : ಇಲ್ಲಿದೆ ಸಂಪೂರ್ಣ ಮಾಹಿತಿ

Next Post

ಇಲಿ ತಿಂದ ಮೀನಿಗಾಗಿ ಸ್ನೇಹಿತನನ್ನೇ ಕಲ್ಲಿನಿಂದ ಜಜ್ಜಿ ಕೊಂದ ಪಾಪಿಗಳು!

Related Posts

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?
ವಿದೇಶ

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಸೋದರರ ಮೃತದೇಹಗಳನ್ನು ಅಪ್ಪಿಕೊಂಡೇ ಸಮುದ್ರದಲ್ಲಿ 62 ಗಂಟೆ ನರಕಯಾತನೆ : ಬದುಕಿಬಂದ ಬಾಲಕ!
ವಿದೇಶ

ಸೋದರರ ಮೃತದೇಹಗಳನ್ನು ಅಪ್ಪಿಕೊಂಡೇ ಸಮುದ್ರದಲ್ಲಿ 62 ಗಂಟೆ ನರಕಯಾತನೆ : ಬದುಕಿಬಂದ ಬಾಲಕ!

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!
ವಿದೇಶ

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ
ವಿದೇಶ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ
ವಿದೇಶ

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?
ವಿದೇಶ

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

Next Post
ಇಲಿ ತಿಂದ ಮೀನಿಗಾಗಿ ಸ್ನೇಹಿತನನ್ನೇ ಕಲ್ಲಿನಿಂದ ಜಜ್ಜಿ ಕೊಂದ ಪಾಪಿಗಳು!

ಇಲಿ ತಿಂದ ಮೀನಿಗಾಗಿ ಸ್ನೇಹಿತನನ್ನೇ ಕಲ್ಲಿನಿಂದ ಜಜ್ಜಿ ಕೊಂದ ಪಾಪಿಗಳು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

ಜಪಾನ್‌ನಲ್ಲಿ ಕ್ರಿಕೆಟ್‌ಗೆ ಹೊಸ ಅಭಿಮಾನಿಗಳು ; ಸಚಿನ್ ಮೆಚ್ಚಿದ ‘ಕ್ರಿಕೆಟ್ ಗೈಡ್’ ಹಿಂದಿನ ವಿಶೇಷ ಕಥೆ!

ಜಪಾನ್‌ನಲ್ಲಿ ಕ್ರಿಕೆಟ್‌ಗೆ ಹೊಸ ಅಭಿಮಾನಿಗಳು ; ಸಚಿನ್ ಮೆಚ್ಚಿದ ‘ಕ್ರಿಕೆಟ್ ಗೈಡ್’ ಹಿಂದಿನ ವಿಶೇಷ ಕಥೆ!

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಇದೆ ಅವಕಾಶ

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಇದೆ ಅವಕಾಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat