ಬೆಳಗಾವಿ: ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ವಿಪ ಸದಸ್ಯ ಸಿ.ಟಿ. ರ ವಿ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ.
ವಿಧಾನಪರಿಷತ್ನ ಕಾರಿಡಾರ್ನಲ್ಲಿ ಹೋಗುತ್ತಿರುವಾಗ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಗಲಿಗರು ಏಕಾಏಕಿ ಸಿಟಿ ರವಿಗೆ ಅಡ್ಡ ಹಾಕಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಕೂಡಲೇ ಹಲ್ಲೆಗೆ ಯತ್ನಿಸಿದ್ದಾರೆ. ಮಾರ್ಷಲ್ಗಳು, ಕಾರಿಡಾರ್ ಗೇಟ್ ಬಂದ್ ಮಾಡಿದರು. ಹೀಗಾಗಿ ಸಿಟಿ ರವಿ ಅಪಾಯದಿಂದ ಪಾರಾಗಿದ್ದಾರೆ.
ಏಕವಚನದಲ್ಲೇ ಏನೋ ಸೂ….ಮಗನೇ…. ನಮ್ಮಕ್ಕನಿಗೆ ಹೀಗಂದ್ಯಾ ಎಂದು ಓರ್ವ ವ್ಯಕ್ತಿ ಒದೆಯುವ ರೀತಿಯಲ್ಲಿ ಕಾಲೆತ್ತಿದ್ದಾನೆ. ಸಿಟಿ ರವಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಇದರಿಂದ ದೊಡ್ಡ ಗಲಾಟೆ ಉಂಟಾಗಿದ್ದು, ಕೂಡಲೇ ಪೊಲೀಸರು ದೌಡಾಯಿಸಿ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರನ್ನು ಚದುರಿಸಿದ್ದಾರೆ. ಹಲವರನ್ನು ವಶಕ್ಕೆ ಪಡೆಸಿದ್ದಾರೆ.
ಇದಕ್ಕೆ ಆಕ್ರೋಶಗೊಂಡ ಸಿ.ಟಿ. ರವಿ ನನ್ನ ಮೇಲೆ ಅಟ್ಯಾಕ್ ಮಾಡಲು ಯತ್ನಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಕೊಲೆ ಬೆದರಿಕೆ ಹಾಕಿದ್ದಾರೆ. ಕೂಡಲೇ ಅವರನ್ನು ಬಂಧಿಸಬೇಕೆಂದು ಧರಣಿ ಕುಳಿತುಕೊಂಡಿದ್ದಾರೆ.
ಈ ಗಲಾಟೆ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ, ಸುವರ್ಣ ಸೌಧದ ಮುಂಭಾಗದಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಿದೆ.