ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯು ಸಿಎಂ ಸಿದ್ದರಾಮಯ್ಯ ವಿರುದ್ಧ ಅವಾಚ್ಯವಾಗಿ ನಿಂದಿಸಿದ್ದ. ಕೆಟ್ಟ ಕೆಟ್ಟ ಭಾಷೆಗಳನ್ನು ಬಳಸಿ ಮಾತನಾಡಿದ್ದ. ಈ ಕುರಿತು ಸುಂಕದಕಟ್ಟೆ ವಾರ್ಡ್ ಕಾಂಗ್ರೆಸ್ ಅಧ್ಯಕ್ಷ ನವೀನ್ ದೂರು ಸಲ್ಲಿಸಿದ್ದರು.
ಮುಗಲಭೆಗೆ ಪ್ರಚೋದನೆ ನೀಡಲಾಗಿದೆ ಎಂಬ ಆರೋಪದಲ್ಲಿ ದೂರು ದಾಖಲಿಸಲಾಗಿತ್ತು. ಈ ಕುರಿತು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪದ್ದು ಅಲಿಯಾಸ್ ಪದ್ಮರಾಜ್ ಎಂಬಾತನನ್ನು ಬಂಧಿಸಿದ್ದಾರೆ.