ಬೆಂಗಳೂರು : ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 78 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಪ್ರೊಸೆಸ್ ಸರ್ವರ್, ಪ್ಯೂನ್ ಹುದ್ದೆಗಳನ್ನು ಭರ್ತಿ (Uttara Kannada District Court Recruitment 2026) ಮಾಡಿಕೊಳ್ಳಲಾಗುತ್ತಿದೆ. ಇದರೊಂದಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ವೃತ್ತಿಜೀವನ ಆರಂಭಿಸಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಂತಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ನೇಮಕಾತಿ ಸಂಸ್ಥೆ: ಜಿಲ್ಲಾ ನ್ಯಾಯಾಲಯ, ಉತ್ತರ ಕನ್ನಡ
ಹುದ್ದೆಗಳ ಹೆಸರು: ಪ್ರೊಸೆಸ್ ಸರ್ವರ್ ಇತ್ಯಾದಿ
ಹುದ್ದೆಗಳ ಸಂಖ್ಯೆ: 78
ಉದ್ಯೋಗ ಸ್ಥಳ: ಉತ್ತರ ಕನ್ನಡ
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 16
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿ ಇದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 27 ಸಾವಿರ ರೂಪಾಯಿಯಿಂದ 61,300 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ಸಡಿಲಿಕೆ ಇದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ uttarakannada.dcourts.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಮೂಲಕವೇ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅಪ್ ಲೋಡ್ ಮಾಡಬೇಕು. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ನಂತರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಫ್ರೆಶರ್‌ಗಳಿಗೆ ಶುಭ ಸಮಾಚಾರ : ಭಾರತೀಯ ನೌಕಾಪಡೆಯಲ್ಲಿ 50 ಹುದ್ದೆಗಳ ನೇಮಕಾತಿ



















