ಉತ್ತರ ಕನ್ನಡ : ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಕಟ್ಟಡ ಕಾಮಗಾರಿ ಸಂದರ್ಭದಲ್ಲಿ ಏಕಾಏಕಿ ಲಿಫ್ಟ್ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಸಾವಿಗೀಡಾಗಿದ್ದಾರೆ. ಮೃತರನ್ನು ಪ್ರಭಾಕರ್ ಮುತ್ತಪ್ಪ ಶೆಟ್ಟಿ, ಬಾಬಣ್ಣ ಪೂಜಾರಿ ಎಂದು ಗುರುತಿಸಲಾಗಿದೆ.
ಕಟ್ಟಡ ನಿರ್ಮಾಣ ಸಾಮಗ್ರಿ ಸಾಗಣೆಗಾಗಿ ಅಳವಡಿಸಲಾಗಿದ್ದ ತಾತ್ಕಾಲಿಕ ಲಿಫ್ಟ್ ಕುಸಿದು ದುರಂತ ಸಂಭವಿಸಿದೆ. ಮುರುಡೇಶ್ವರದ ಓಲಗ ಮಂಟಪದ ಸಮೀಪ ನಾಲ್ಕು ಮಹಡಿಗಳ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಸಾಗಿಸಲು ತಾತ್ಕಾಲಿಕ ಲಿಫ್ಟ್ ಅಳವಡಿಸಲಾಗಿತ್ತು.
ಅತಿ ಭಾರವಾದ ಕಾರಣ ಏಕಾಏಕಿ ಹಗ್ಗ ತುಂಡಾಗಿ ಲಿಫ್ಟ್ ನೆಲಕ್ಕೆ ಕುಸಿದಿದೆ. ಅದರಲ್ಲಿದ್ದ ಇಬ್ಬರು ಕಾರ್ಮಿಕರು ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಕಟ್ಟಡ ನಿರ್ಮಾಣದ ವೇಳೆ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡಿದ್ದರೇ ಇಲ್ಲವೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ.
ಇದನ್ನೂ ಓದಿ : ಉಡುಪಿ | ಶಾಂಭವಿ ನದಿಯಲ್ಲಿ ಉದ್ಯಮಿ, ಕಂಬಳ ಸಂಘಟಕ ಅಭಿಷೇಕ್ ಆಳ್ವ ಮೃತದೇಹ ಪತ್ತೆ



















