ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಆಪ್ತನನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.
ನಾಗೇಂದ್ರ ಅವರ ಪಿಎ ಹರೀಶ್ ಎಂಬಾತನನ್ನು ಅಧಿಕಾರಿಗಳು ಬಂಧಿಸಿ ಶಾಂತಿನಗರದ ಇಡಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಅಕ್ರಮವಾಗಿ ಹಣ ಸಾಗಾಟದಲ್ಲಿ ಹರೀಶ್ ಪಾತ್ರ ವಹಿಸಿರುವುದು ಇಡಿ ತನಿಖೆಯಿಂದ ದೃಢಪಟ್ಟಿದೆ. ಸಚಿವರ ಪರವಾಗಿ ಪಿಎ ಡೀಲ್ ನಡೆಸಿರುವುದು ಬಹಿರಂಗವಾಗಿದೆ. ಹೀಗಾಗಿ ಅಧಿಕಾರಿಗಳು ಬಂಧಿಸಿದ್ದಾರೆ ಎನ್ನಲಾಗಿದೆ.
ಮಾಜಿ ಸಚಿವ ನಾಗೇಂದ್ರ ನಿವಾಸದ ಮೇಲೆ ಬುಧವಾರ ಬೆಳ್ಳಂಬೆಳಗ್ಗೆ ಇಡಿ ದಾಳಿ ನಡೆಸಿತ್ತು. ನಾಗೇಂದ್ರ ಅವರಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲನೆ ನಡೆಸಿದರು.