ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಸಚಿವ ಬಿ. ನಾಗೇಂದ್ರಗೆ ಸಿಬಿಐ ಶಾಕ್ ಕೊಟ್ಟಿದೆ. ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ನಾಗೇಂದ್ರ ಅವರಿಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಹೀಗಾಗಿ ನಾಗೇಂದ್ರ ಅವರಿಗೆ ಈಗ ಬಂಧನದ ಭೀತಿ ಎದುರಾಗಿದೆ.
ವಾಲ್ಮೀಕಿ ಹಗರಣ ಹೊರ ಬಂದ ಬಳಿಕ ಸಚಿವ ಸ್ಥಾನಕ್ಕೆ ಮಾಜಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಿದ್ದರು. ಬಳಿಕ ಬಂಧನಕ್ಕೊಳಗಾಗಿ ಜೈಲು ವಾಸ ಅನುಭವಿಸಿದ್ದ ಬಿ.ನಾಗೇಂದ್ರ, ಇತ್ತೀಚೆಗಷ್ಟೇ ಜಾಮೀನು ಪಡೆದು ಹೊರಬಂದಿದ್ದರು. ಸಂಪುಟ ಪುನಾರಚನೆ ವೇಳೆ ತನಗೂ ಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದ ನಾಗೇಂದ್ರ ಇದೀಗ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುರುವಾರ ಸಂಜೆಯೇ ಸಿಬಿಐ ಅಧಿಕಾರಿಗಳು ನಾಗೇಂದ್ರಗೆ ನೋಟಿಸ್ ನೀಡಿದ್ದಾರೆ.
ಸಚಿನ ಸ್ಥಾನದ ಕನಸು ಕಾಣ್ತಿರುವ ನಾಗೇಂದ್ರಗೆ ಸಿಬಿಐ ನೋಟಿಸ್ ಶಾಕ್ ಕೊಟ್ಟಿದ್ದು, ಮಾಜಿ ಸಚಿವರು ಮತ್ತೆ ಅರೆಸ್ಟ್ ಆಗ್ತಾರಾ ಎಂಬ ಪ್ರಶ್ನೆ ಮೂಡಿದೆ. ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಚುರುಕುಗೊಳಿಸಿದ್ದು, ವಿಚಾರಣೆ ವೇಳೆ ಹೆಚ್ಚಿನ ಸಾಕ್ಷ್ಯ ದೊರೆತರೆ ನಾಗೇಂದ್ರ ಅವರನ್ನ ಮತ್ತೊಮ್ಮೆ ಬಂಧಿಸುವ ಸಾಧ್ಯತೆ ಇದೆ ಎನ್ನಲಾಗ್ತಿದೆ.
ಇದನ್ನೂ ಓದಿ : ಬೆಂಗಳೂರು | ಕಾಲೇಜು ಆಡಳಿತ ಮಂಡಳಿಯಿಂದ ಕಿರುಕುಳ ಆರೋಪ.. ಮನನೊಂದು ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ!



















