ವಾಲ್ಮೀಕಿ ಎಸ್ಟಿ ಅಭಿವೃದ್ಧಿ ನಿಗಮದಿಂದ (Karnataka Maharshi Valmiki Scheduled Tribe Development Corporation Ltd) ಅಕ್ರಮವಾಗಿ ಸಹಕಾರಿ ಬ್ಯಾಂಕ್‌ಗೆ ವರ್ಗಾವಣೆಯಾಗಿದ್ದ ಅಷ್ಟು ಹಣದ ಪೈಕಿ 45 ಕೋಟಿ ರೂ. ಹಣವನ್ನು ವಿಶೇಷ ತನಿಖಾ ತಂಡ (SIT) ಸೀಜಾ ಮಾಡಿದೆ ಎನ್ನಲಾಗಿದೆ.
ಹೈದರಾಬಾದ್ ನಲ್ಲಿರುವ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕಿಗೆ ಒಟ್ಟು 94.73 ಕೋಟಿ ರೂ. ವರ್ಗಾವಣೆಯಾಗಿತ್ತು. ಈ ಹಿನ್ನೆಲೆಯಲ್ಲಿ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್ ಮಾಲೀಕ ಸತ್ಯನಾರಾಯಣ್ ರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಬ್ಯಾಂಕ್ ನ 18 ನಕಲಿ ಖಾತೆಗಳಿಗೆ ವರ್ಗಾವಣೆಯಾಗಿದ್ದ 94.73 ಕೋಟಿ ರೂ ಪೈಕಿ ಬಹುಪಾಲು ಹಣ ಡ್ರಾ ಮಾಡಿಕೊಳ್ಳಲಾಗಿದೆ. ಉಳಿದ ಹಣ ಎಲ್ಲಿಗೆ ಹೋಗಿದೆ ಎಂಬುವುದರ ಕುರಿತು ಎಸ್ ಐಟಿ ತನಿಖೆ ನಡೆಸುತ್ತಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪದ್ಮನಾಭ, ಪರಶುರಾಮ್, ನೆಕ್ಕುಂಟಿ ನಾಗರಾಜ್, ನಾಗೇಶ್ವರ ರಾವ್, ಸತ್ಯನಾರಾಯಣರನ್ನು ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.