ಪಾಟ್ನಾ : ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಿಹಾರದ ಪೂರ್ಣಿಯಾದಲ್ಲಿ ನಡೆದಿದೆ. ಜೋಗಬಾನಿಯಿಂದ ಪಾಟಲಿಪುತ್ರಕ್ಕೆ ಚಲಿಸುತ್ತಿದ್ದ ವಂದೇ ಭಾರತ್ ರೈಲು ಬೆಳಗ್ಗೆ 5 ಗಂಟೆ ಸುಮಾರಿಗೆ ಪೂರ್ಣಿಯಾ ಪಟ್ಟಣದ ಬಳಿ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿ ವಾಪಸ್ ಆಗುತ್ತಿದ್ದ ಜನರಿಗೆ ಡಿಕ್ಕಿ ಹೊಡೆದಿದೆ.
ಸದ್ಯ ಗಾಯಗೊಂಡವರನ್ನು ಜಿಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಈ ಅಪಘಾತಕ್ಕೆ ರೈಲ್ವೆ ಕ್ರಾಸಿಂಗ್ ಸಿಬ್ಬಂದಿಯ ನಿರ್ಲಕ್ಷ್ಯವೋ ಅಥವಾ ಜನರು ಹೈಸ್ಪೀಡ್ ರೈಲನ್ನು ನಿರ್ಲಕ್ಷಿಸಿ ಕ್ರಾಸಿಂಗ್‌ಗೆ ಪ್ರಯತ್ನಿಸಿದ್ದರೋ ಎಂಬುದರ ಕುರಿತು ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.