ಬೆಂಗಳೂರು: ಕಬ್ಬನ್ ಪಾರ್ಕ್, ಎಂ.ಜಿ. ರಸ್ತೆ ಮಧ್ಯೆ ಹಳಿ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜ. 19ರಂದು ಮೆಟ್ರೋ ನೇರಳೆ ಮಾರ್ಗದ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ನಮ್ಮ ಮೆಟ್ರೋ ತಿಳಿಸಿದೆ.
ಜ. 19ರ ಬೆಳಗ್ಗೆ 7 ಗಂಟೆಯಿಂದ 10ರ ವರೆಗೆ ಮೆಟ್ರೋ ಸೇವೆ ಇರುವುದಿಲ್ಲ. ನಾಡಪ್ರಭು ಕೆಂಪೇಗೌಡ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ಮಧ್ಯೆ 3 ಗಂಟೆ ಮೆಟ್ರೋ ಸೇವೆ ಸ್ಥಗಿತವಾಗಿರಲಿದೆ ಎಂದು ಪ್ರಕಟಣೆ ತಿಳಿಸಿದೆ.
ಭಾನುವಾರದಂದು ನೇರಳೆ ಮಾರ್ಗದಲ್ಲಿನ ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತು ಮೆಟ್ರೋ ನಿಲ್ದಾಣಗಳ ಮಧ್ಯೆ ಹಳಿ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಹೀಗಾಗಿ ಕೆಂಪೇಗೌಡ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ಬೆಳಿಗ್ಗೆ 07:00 ರಿಂದ 10.00 ರ ವರೆಗೆ ಮೂರು ಗಂಟೆಗಳ ಕಾಲ ಮೆಟ್ರೋ ಸೇವೆ ಇರುವುದಿಲ್ಲ.
ನೇರಳೆ ಮಾರ್ಗದ ಇನ್ನಿತರ ವಿಭಾಗಗಳಲ್ಲಿ ಬರುವ, ಚಲ್ಲಘಟ್ಟ ಮತ್ತು ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಹಾಗೂ ವೈಟ್ಫೈಲ್ಡ್ (ಕಾಡುಗೋಡಿ) ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ಮಧ್ಯೆ ಇನ್ನುಳಿದ ಸಮಯದಲ್ಲಿ ಸಂಚಾರ ಇರಲಿದೆ.