ಬೆಂಗಳೂರು: ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ (BPCL Recruitment 2025) ಖಾಲಿ ಇರುವ ಹಲವು ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಜೂನ್ 27ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಭ್ಯರ್ಥಿಗಳು bharatpetroleum.inಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಯಾವ ಹುದ್ದೆಗಳ ನೇಮಕಾತಿ?
ಜೂನಿಯರ್ ಎಕ್ಸಿಕ್ಯೂಟಿವ್ (Engineering)
ಅಸೋಸಿಯೇಟ್ ಎಕ್ಸಿಕ್ಯೂಟಿವ್ (Engineering)
ಜೂನಿಯರ್ ಎಕ್ಸಿಕ್ಯೂಟಿವ್ (Accounts)
ಅಸೋಸಿಯೇಟ್ ಎಕ್ಸಿಕ್ಯೂಟಿವ್ (Quality Assurance)
ಸೆಕ್ರೆಟರಿ (BPCL)
ನೇಮಕಾತಿ ಹೇಗೆ?
ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿಗಳ ಪರಿಶೀಲನೆ, ಅವರ ಅನುಭವ, ಕಂಪ್ಯೂಟರ್ ಆಧಾರಿತ ಟೆಸ್ಟ್, ಗುಂಪು ಸಂದರ್ಶನ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಎಂಜಿನಿಯರಿಂಗ್, ಬಿ.ಟೆಕ್, ಬಿಎಸ್ಸಿ, ಬಿ.ಇ, ಇಂಟರ್ ಸಿಎ ಸೇರಿ ಹಲವು ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ.
ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗೆ 30 ಸಾವಿರ ರೂಪಾಯಿಯಿಂದ 1.2 ಲಕ್ಷ ರೂಪಾಯಿವರೆಗೆ ಮಾಸಿಕ ಸಂಬಳ ನೀಡಲಾಗುತ್ತದೆ. ಅಸೋಸಿಯೇಟ್ ಎಕ್ಸಿಕ್ಯೂಟಿವ್ ಹುದ್ದೆಗೆ 1.4 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಕನಿಷ್ಠ 32 ಹಾಗೂ ಗರಿಷ್ಠ 35 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ.