ಬೆಂಗಳೂರು: ನಗರದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾಯಿಲೇಔಟ್ ನಲ್ಲಿ ಪ್ರವಾಹದ ಸ್ಥಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸಾಯಿ ಲೇಔಟ್ ನಿವಾಸಿಗಳಿಗೆ ನಾನಾ ಬಗೆಯ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ.
ಶೀತ, ಕೆಮ್ಮು, ನೆಗಡಿ, ಜ್ವರ ಸೇರಿದಂತೆ ಚರ್ಮದ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಸಾಯಿ ಲೇಔಟ್ ನಿವಾಸಿಗಳಿಗೆ ತುರ್ತು ಔಷಧಿ ನೀಡಲು ಬಿಬಿಎಂಪಿ ಆರೋಗ್ಯ ಸಿಬ್ಬಂದಿಗಳು ಮುಂದಾಗಿದ್ದಾರೆ.
ರೋಗ ನಿರೋಧಕ ಔಷಧಿ ಸೇರಿದಂತೆ ಹಲವು ಬಗೆಯ ಔಷಧಿಗಳನ್ನು ಪೂರೈಸಲಾಗುತ್ತಿದೆ. ಮಕ್ಕಳಿಗೆ ವಿಶೇಷವಾಗಿ ಔಷಧಿಗಳನ್ನು ಬಿಬಿಎಂಪಿ ಆರೋಗ್ಯ ಸಿಬ್ಬಂದಿಗಳು ನೀಡುತ್ತಿದ್ದಾರೆ.