ಬೆಂಗಳೂರು : ರಾಜ್ಯದಲ್ಲಿ ಕಳೆದೊಂದು ವಾರದಿಂದ ಮಳೆ ಬಿಡದೇ ಸುರಿಯುತ್ತಿದೆ. ಕರಾವಳಿ, ಉತ್ತರ ಒಳನಾಡು, ಮಲೆನಾಡು ಪ್ರದೇಶಗಳಲ್ಲಿ ನಿರಂತರವಾಗಿ ಭಾರಿ ಮಳೆಯಾಗುತ್ತಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
1 ಜಿಲ್ಲೆಗೆ ರೆಡ್ ಅಲರ್ಟ್ ಹಾಗೂ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಹಿನ್ನೆಲೆ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಇಲಾಖೆಯಿಂದ ಎಚ್ಚರಿಕೆ ನೀಡಿದೆ.
ಬೆಂಗಳೂರು, ಮಂಡ್ಯ, ರಾಮನಗರ ಸೇರಿದಂತೆ ಉಳಿದ ಜಿಲ್ಲೆಯಲ್ಲಿ ಸಾಧರಣ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.


















