ಹಾಸನ: ಸಕಲೇಶಪುರ ಮತ್ತು ಸುಬ್ರಹ್ಮಣ್ಯ ಮಧ್ಯೆ ಭಾರೀ ಮಳೆಯಾಗುತ್ತಿದ್ದು, ರೈಲ್ವೆ ಟ್ರ್ಯಾಕ್ ಮೇಲೆ ಮಣ್ಣು ಕುಸಿದು ಸಂಚಾರಕ್ಕೆ ಅಡೆತಡೆ ಉಂಟಾಗಿದೆ. ಹೀಗಾಗಿ ಹಲವು ರೈಲುಗಳ ಸಂಚಾರವನ್ನು ಬದಲಾವಣೆ ಮಾಡಲಾಗಿದೆ.
ಮಂಗಳೂರು ಸೆಂಟ್ರಲ್ – ವಿಜಯಪುರ ಎಕ್ಸ್ ಪ್ರೆಸ್ ರೈಲು ಕಾರವಾರ, ಮಡಗಾಂವ್, ಲೋಂಡಾ, ಎಸ್ ಎಸ್ ಎಸ್- ಹುಬ್ಬಳ್ಳಿ ಮಾರ್ಗವಾಗಿ ಸಂಚಾರ ಮಾಡಲಿದೆ. ಕಣ್ಣೂರು- ಕೆಎಸ್ಆರ್ ಬೆಂಗಳೂರು ಎಕ್ಸ್ ಪ್ರೆಸ್ ರೈಲು ಕಾಸರಗೋಡು, ಪಾಲಕ್ಕಾಡ್, ಸೇಲಂ ಮತ್ತು ಜೋಲಾರಪೇಟೆ ಮಾರ್ಗವಾಗಿ ಸಂಚಾರ ಮಾಡಲಿದೆ.
ಕಾರವಾರ – ಕೆಎಸ್ಆರ್ ಬೆಂಗಳೂರು ಎಕ್ಸ್ ಪ್ರೆಸ್ ರೈಲು ಮಂಗಳೂರು ಜಂಕ್ಷನ್, ಕಾಸರಗೋಡು, ಶೋರನೂರು, ಪಾಲಕ್ಕಾಡ್, ಸೇಲಂ ಮತ್ತು ಜೋಲಾರಪೇಟೆ ಮಾರ್ಗವಾಗಿ ಸಂಚಾರ ಮಾಡಲಿದೆ. ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ಮುರುಡೇಶ್ವರ ರೈಲು ಎಸ್ ಎಂ ವಿ ಟಿ ಬೆಂಗಳೂರು ನಿಲ್ದಾಣದಿಂದ 185 ನಿಮಿಷ ತಡವಾಗಿ ಹೊರಡಲಿದೆ.
ವಿಜಯಪುರ ಮಂಗಳೂರು ಸೆಂಟ್ರಲ್ ರೈಲು ಹುಬ್ಬಳ್ಳಿ, ಲೋಂಡಾ, ಕ್ಯಾಸಲ್ ರಾಕ್, ಕುಲೇಮ್, ಮಡಗಾವ್ ಕಾರವಾರ, ತೋಕೂರು, ಪಡಿಲ್ ಮಾರ್ಗವಾಗಿ ಸಂಚರಿಸಲಿದೆ.



















