ಚಿಕ್ಕಮಗಳೂರು: ಗಿರಿಸಾಲಿನಲ್ಲಿ ವರುಣನ ಅಬ್ಬರ ಮುಂದುವರಿದಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಭದ್ರಾ ಹುಲಿ ಸಂರಕ್ಷಿತ ಅರಣ್ಯಕ್ಕೆ ಹೊಂದಿಕೊಂಡಿರುವ ಹೆಬ್ಬೆ ಜಲಪಾತದಲ್ಲಿ ಭಾರಿ ಪ್ರಮಾಣದ ನೀರು ಬೋರ್ಗರೆಯುತ್ತಾ ಜಲವೈಭವ ಸೃಷ್ಟಿಸಿದೆ.
ಕೆಮ್ಮಣ್ಣುಗುಂಡಿ ಸುತ್ತಮುತ್ತ ಭಾರಿ ಮಳೆ ಹಿನ್ನಲೆ ಜಲಪಾತದ ಸಮೀಪ ಪ್ರವಾಸಿಗರು ಹೋಗದಂತೆ ಎಚ್ಚರಿಕೆ ನೀಡಲಾಗಿದ್ದು, ಸುಮಾರು 100 ಅಡಿ ಎತ್ತರದಿಂದ ದುಮ್ಮುಕುವ ಹೆಬ್ಬೆ ಫಾಲ್ಸ್ ನಿಂದ ಅಪಾಯದ ಮಟ್ಟ ಮೀರಿ ನೀರು ಹರಿಯುತ್ತಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರವಾಸಿಗರು ಸಂಖ್ಯೆಯೂ ಹೆಚ್ಚಳವಾಗುತ್ತಿದ್ದು, ಹೆಬ್ಬೆ ಫಾಲ್ಸ್ ಜಲವೈಭವಕ್ಕೆ ಪ್ರವಾಸಿಗರು ಫುಲ್ ಫಿದಾ ಆಗಿದ್ದಾರೆ.



















