ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ಹಮ್ಮಿಕೊಂಡಿದ್ದು, ಈಗಾಗಲೇ ಮೊದಲ ಹಂತದ ಯಾತ್ರೆ ಮುಗಿದಿದೆ. ನಾಳೆಯಿಂದ ಎರಡನೇ ಹಂತದಲ್ಲಿ ಆರಂಭವಾಗಲಿದೆ. ಹೀಗಾಗಿ ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿದೆ.
ಬೆಲೆ ಏರಿಕೆ ವಿರೋಧಿಸಿ ಬಿಜೆಪಿಯು ಜನಾಕ್ರೋಶ ಹಮ್ಮಿಕೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಈಗಾಗಲೇ ಮೊದಲ ಹಂತದ ಜನಾಕ್ರೋಶ ಯಾತ್ರೆ ಮುಗಿದಿದೆ. ನಾಳೆಯಿಂದ ಎರಡನೇ ಹಂತದಲ್ಲಿ ಜನಾಕ್ರೋಶ ಯಾತ್ರೆ ಆರಂಭವಾಗಲಿದೆ.
ಕಿತ್ತೂರು ಕರ್ನಾಟಕ ಭಾಗದಲ್ಲಿ ನಾಳೆಯಿಂದ ಎರಡನೇ ಹಂತದ ಜನಾಕ್ರೋಶ ಯಾತ್ರೆ ಆರಂಭವಾಗಲಿದೆ. ಕಿತ್ತೂರು ಕರ್ನಾಟಕದಲ್ಲಿ ನಾಳೆಯಿಂದ ಯಾತ್ರೆಯ ಜೊತೆಗೆ ಬಿಜೆಪಿಗೆ ಭದ್ರ ಬುನಾದಿ ಹಾಕಿ ಕೊಡಲು ಸಜ್ಜಾದ ವಿಜಯೇಂದ್ರ ತಯಾರಾಗಿದ್ದಾರೆ. ವೀರಶೈವ-ಲಿಂಗಾಯತ ಸಮುದಾಯದ ಮತಗಳೇ ನಿರ್ಣಾಯವಾಗಿರುವ ಕ್ಷೇತ್ರಗಳಲ್ಲಿ ನಾಳೆಯಿಂದ ವಿಜಯೇಂದ್ರ ಯಾತ್ರೆ ಹಮ್ಮಿಕೊಂಡಿದ್ದಾರೆ.



















