ಬೆಂಗಳೂರು : ನೀವು ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಬೇಕು ಎಂದು ಬಯಸುತ್ತಿದ್ದೀರಾ? ಅದರಲ್ಲೂ, ಬೆಂಗಳೂರಿನಲ್ಲಿ ಉದ್ಯೋಗ ಮಾಡಬೇಕು ಎಂದು ಇಚ್ಛಿಸಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ವೀರಶೈವ ಸಹಕಾರಿ ಬ್ಯಾಂಕಿನಲ್ಲಿ (Veerashaiva Sahakari Bank Recruitment 2026) ಖಾಲಿ ಇರುವ 12 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ನೇಮಕಾತಿಯ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ವೀರಶೈವ ಸಹಕಾರಿ ಬ್ಯಾಂಕ್
ಒಟ್ಟು ಹುದ್ದೆಗಳು: 12
ಹುದ್ದೆಗಳ ಹೆಸರು: ಜೂನಿಯರ್ ಅಸಿಸ್ಟಂಟ್ ಇತ್ಯಾದಿ
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮೇ 27
10 ಜೂನಿಯರ್ ಅಸಿಸ್ಟಂಟ್ ಹಾಗೂ 2 ಅಟೆಂಡೆಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪದವಿ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದು. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 34,100 ರೂ.ನಿಂದ 92,500 ರೂ.ವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18ರಿಂದ 40 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ, ಕೆಟಗರಿ 1 ಸಮುದಾಯದವರಿಗೆ 5 ವರ್ಷಗಳ ವಯೋಮಿತಿ ವಿನಾಯಿತಿ ಇದೆ. ಜನರಲ್, 2ಎ, 2ಬಿ, 3ಎ, 3ಬಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರು ಅಧಿಕೃತ ವೆಬ್ ಸೈಟ್ ಆಗಿರುವ vsbank.in ಗೆ ಭೇಟಿ ನೀಡಬಹುದಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಪ್ರೊಫೆಸರ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ



















