ಹಿರಿಯ ನಟಿ ಬಿ. ಸರೋಜಾದೇವಿ ಇಹಲೋಕ ತ್ಯಜಿಸಿದ್ದಾರೆ.
ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಟಿ ಕೊನೆಯುಸಿರು ಎಳೆದಿದ್ದಾರೆ. ನಟಿ ಯಶವಂತಪುರ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕನ್ನಡದ ಹಿರಿಯ ನಟಿ ಡಾ. ರಾಜಕುಮಾರ್, ವಿಷ್ಣುವರ್ಧನ್, ಅಂಬರೀಶ್ ಸೇರಿದಂತೆ ಹಲವಾರು ನಟರೊಂದಿಗೆ ನಟಿಸಿದ್ದರು. ಕನ್ನಡ ಹಿರಿಯ ನಟಿಯ ಸಾವಿಗೆ ಇಡೀ ಚಿತ್ರರಂಗ ಹಾಗೂ ಕನ್ನಡಿಗರು ಕಂಬನಿ ಮಿಡಿಯುತ್ತಿದ್ದಾರೆ.
ಕನ್ನಡದ ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಹಿರಿಯ ನಟಿ ಹಿರಿಯ ನಟಿ ಬಿ.ಸರೋಜಾದೇವಿ(87) ಇಹಲೋಕ ತ್ಯಜಿಸಿದ್ದಾರೆ. 1938ರ ಜನವರಿ 7ರಂದು ಜನಿಸಿದ್ದರು. ಇತ್ತೀಚೆಗೆ ಸರೋಜಾದೇವಿ (B. Saroja Devi) ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.
ಸುಮಾರು 6 ದಶಕಗಳ ಕಾಲ ಚಿತ್ರರಂಗದ ಸೇವೆ ಮಾಡಿರುವ ಇವರು 5 ಭಾಷೆಗಳಲ್ಲಿ 200ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಚಿತ್ರರಂಗದ ಸಾಧನೆಗೆ ಇವರಿಗೆ ಕೇಂದ್ರ ಸರ್ಕಾರ ಪದ್ಮಭೂಷಣ ನೀಡಿ ಪುರಸ್ಕರಿಸಿತ್ತು.
17ನೇ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಭೀಷ್ಮ ಹೊನ್ನಪ್ಪ ಭಾಗವತರ್ ಅವರ `ಮಹಾಕವಿ ಕಾಳಿದಾಸ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿದ್ದರು.
“ಶಾನ್ ಮಸೂದ್, ಭಾರತದ ನಾಯಕ” : ಕಾಮೆಂಟರಿ ವೇಳೆ ದಕ್ಷಿಣ ಆಫ್ರಿಕಾದ ದಿಗ್ಗಜ ಶಾನ್ ಪೊಲಾಕ್ ಅವರಿಂದ ಮಹಾ ಪ್ರಮಾದ!