ಮುಂಬೈ : ಬಾಲಿವುಡ್‌ನ ಹಿರಿಯ ನಟ, ಸೂಪರ್ ಸ್ಟಾರ್ ಧರ್ಮೇಂದ್ರ ಅವರು ಮುಂಬೈನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಆಸ್ಪತ್ರೆಯಲ್ಲಿದ್ದು, ವೈದ್ಯರ ನಿಗಾದಲ್ಲಿದ್ದಾರೆ.

ವರದಿಗಳ ಪ್ರಕಾರ, ಅವರು ನಿಯಮಿತ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು, ಆದರೆ ಹೆಚ್ಚಿನ ಪರೀಕ್ಷೆಗಳಿಗಾಗಿ ಅಲ್ಲಿಯೇ ಉಳಿದುಕೊಂಡಿದ್ದಾರೆ. ಅವರ ಆರೋಗ್ಯದ ಬಗ್ಗೆ ಯಾವುದೇ ವದಂತಿಗಳನ್ನು ನಂಬಬೇಡಿ ಎಂದೂ ಕೂಡಾ ಸಾರ್ವಜನಿಕರಲ್ಲಿ ಕುಟುಂಬ ಮನವಿ ಮಾಡಿಕೊಂಡಿದೆ.
ಅವರ ಡಿಸ್ಚಾರ್ಜ್ ದಿನಾಂಕದ ಕುರಿತು ಸದ್ಯಕ್ಕೆ ಯಾವುದೇ ಮಾಹಿತಿ ಲಭ್ಯವಿಲ್ಲ. ಪುತ್ರರಾದ ಸನ್ನಿ ಡಿಯೋಲ್ ಮತ್ತು ಬಾಬಿ ಡಿಯೋಲ್, ತಮ್ಮ ತಂದೆಯೊಂದಿಗೆ ಇರಲು ತಮ್ಮ ಕೆಲಸಗಳನ್ನು ಪೂರ್ಣಗೊಳಿಸಿದ್ದಾರೆ. ಸೂಪರ್ ಸ್ಟಾರ್ ಡಿಸೆಂಬರ್‌ನಲ್ಲಿ ತಮ್ಮ 90ನೇ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. 90ನೇ ಜನ್ಮದಿವನ್ನು ವಿಶೇಷವಾಗಿ ಆಚರಿಸಲು ಅಭಿಮಾನಿಗಳೂ ಸಜ್ಜಾಗಿದ್ದಾರೆ.
ಇದನ್ನೂ ಓದಿ : ಕರ್ನಾಟಕ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಕೋರಿದ ಆರ್‌ಸಿಬಿ ಆಟಗಾರರು



















