ಬೆಂಗಳೂರು: ಹಿರಿಯ ರಂಗ ಕಲಾವಿದೆ ವಿಮಲಾ ರಂಗಾಚಾರ್ (Vimala Rangachar) (97) ವಿಧಿವಶರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ವಿಮಲಾ ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಭಾರತೀಯ ನಾಟ್ಯ ಸಂಘದ ಕರ್ನಾಟಕ ಘಟಕದ ಅಧ್ಯಕ್ಷರಾಗಿದ್ದ ವಿಮಲಾ, ಬೆಂಗಳೂರಿನ ಎಡಿಎ ರಂಗಮಂದಿರದ ಗೌರವ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು. ಜೊತೆಗೆ ಶಿಕ್ಷಣ ಕ್ಷೇತ್ರ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಕೂಡ ಸೇವೆ ಸಲ್ಲಿಸಿದ್ದರು. ಬೆಂಗಳೂರಿನ ಸೇವಾ ಸದನವನ್ನು ವಿಮಲಾ ರಂಗಾಚಾರ್ ಕಟ್ಟಿ ಬೆಳೆಸಿದ್ದರು.