ಶಿವಮೊಗ್ಗ: ಪಶು ವೈದ್ಯರೊಬ್ಬರು ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ಹಕ್ರೆ ಬಳಿಯ ಶರಾವತಿ ಹಿನ್ನೀರಿನಲ್ಲಿ ನಡೆದಿದೆ.
ಸುನೀಲ್ (38)ಮೃತ ದುರ್ದೈವಿ. ಅವರು ಸಾಗರದ ಮಾಸೂರಿನ ಪಶು ಆಸ್ಪತ್ರೆಯಲ್ಲಿ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಭಾನುವಾರ (ಜ.11) ಕುಟುಂಬ ಸಮೇತರಾಗಿ ಶರಾವತಿ ಹಿನ್ನೀರಿಗೆ ಪಿಕ್‌ನಿಕ್ ಹೋಗಿದ್ದರು. ಈ ವೇಳೆ ಈಜಲು ನೀರಿಗಿಳಿದಿದ್ದಾಗ ಮುಳುಗಿ ಸಾವನ್ನಪ್ಪಿದ್ದಾರೆ.
ಸುನೀಲ್ ನೀರಲ್ಲಿ ಮುಳುಗಿ ನಾಪತ್ತೆಯಾಗುತ್ತಿದ್ದಂತೆ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ನೀರಿನಿಂದ ಶವ ಮೇಲಕ್ಕೆತ್ತಿದ್ದಾರೆ. ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ರಣಹದ್ದು ಬಗ್ಗೆ ತಪ್ಪಾದ ಹೇಳಿಕೆ ಆರೋಪ | ಕಿಚ್ಚ ಸುದೀಪ್ ವಿರುದ್ಧ ದೂರು ದಾಖಲು



















