ಪುತ್ತೂರು: ಪಶುವೈದ್ಯೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಪುತ್ತೂರಿನ ಬಪ್ಪಳಿಗೆ ನಿವಾಸಿ ಗಣೇಶ್ ಜೋಶಿ ಎಂಬುವವರ ಪುತ್ರಿ ಕೀರ್ತನಾ ಜೋಶಿ (27) ಆತ್ಮಹತ್ಯೆ ಮಾಡಿಕೊಂಡ ವೈದ್ಯೆ. ಮಂಗಳೂರಿನ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಕೀರ್ತನಾ, ಪುತ್ತೂರು ಮತ್ತು ಕೊಯಿಲಾದಲ್ಲಿ ಖಾಸಗಿಯಾಗಿ ಅಭ್ಯಾಸ ಮಾಡಿಕೊಂಡಿದ್ದರು. ವೈದ್ಯೆಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎನ್ನಲಾಗಿದೆ.