ಅಚ್ಚರಿಯ ಬೆಳವಣಿಗೆ ಎಂಬಂತೆ ಭಾರತದ ಉಪರಾಷ್ಟ್ರಪತಿ ಜಗದೀಪ್ ಧಂಖರ್ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಆರೋಗ್ಯ ಸಮಸ್ಯೆ ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸುವ ಅಗತ್ಯವನ್ನು ಉಲ್ಲೇಖಿಸಿರುವ ಜಗದೀಪ್ ಧಂಖರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದ ಪತ್ರದಲ್ಲಿ ತಮ್ಮ ರಾಜೀನಾಮೆ ಭಾರತದ ಸಂವಿಧಾನದ 67(ಎ) ವಿಧಿಗೆ ಅನುಗುಣವಾಗಿದೆ ಎಂದು ಜಗದೀಪ್ ಧಂಖರ್ ಹೇಳಿದ್ದಾರೆ.



















