ಬೆಂಗಳೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ಅವರ ಮೊಮ್ಮಗನ ಮದುವೆ ಸಮಾರಂಭ ಇಂದು ನಡೆಯುತ್ತಿದ್ದು, ನಿನ್ನೆ ನಡೆದ ಆರತಕ್ಷತೆ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ, ಜೆ.ಪಿ. ನಡ್ಡಾ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು.
ಬಿ.ವೈ ರಾಘವೇಂದ್ರ (BY Raghavendra) ಅವರ ಪುತ್ರ ಸುಭಾಷ್ ಇಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಹೀಗಾಗಿ ಆರತಕ್ಷತೆಗೆ ಹಲವಾರು ಗಣ್ಯರು ಭಾಗವಹಿಸಿದ್ದರು. ಈ ವೇಳೆ ನವ ಜೋಡಿಗೆ ಆಶೀರ್ವದಿಸಿ ಹಾರೈಸಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆ.ಪಿ ನಡ್ಡಾ, ಉಪರಾಷ್ಟ್ರಪತಿ ಜಗದೀಪ್ ಧನಕರ್ (Jagdeep Dhankhar), ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ಸಿಎಂ ಸಿದ್ದರಾಮಯ್ಯ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಆಂಧ್ರ ಪ್ರದೇಶದ ರಾಜ್ಯಪಾಲ ಅಬ್ದುಲ್ ನಜೀರ್, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಡಾ. ಜಿ ಪರಮೇಶ್ವರ್ ಸೇರಿದಂತೆ ಗಣ್ಯರು ಭಾಗವಹಿಸಿದ್ದರು.