ನವದೆಹಲಿ : ಜಗದೀಪ್ ಧನಕರ್ ರಾಜೀನಾಮೆಯಿಂದ ತೆರವಾದ ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು (ಮಂಗಳವಾರ, ಸೆ.09) ಬೆಳಗ್ಗೆ ಮತದಾನ ಆರಂಭಗೊಂಡಿದೆ,.
ಇಂದು ರಾತ್ರಿ 7ಗಂಟೆ ಸುಮಾರಿಗೆ ದೇಶದ ನೂತನ ಉಪ ರಾಷ್ಟ್ರಪತಿ ಯಾರಾಗಲಿದ್ದಾರೆ ಎಂಬ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ಈಗಾಗಲೇ ಉಭಯ ಸದನದ ಸದಸ್ಯರುಗಳಿಂದ ಮತದಾನ ನಡೆಯುತ್ತಿದ್ದು, ಸಂಜೆ 6 ಗಂಟೆ ಸುಮಾರಿಗೆ ಮತ ಎಣಿಕೆ ಪ್ರಕ್ರಿಯೇ ಆರಂಭಗೊಳ್ಳಲಿದ್ದು, ಸಂಜೆ 7:30ರ ಸುಮಾರಿಗೆ ಮುಂದಿನ ಉಪ ರಾಷ್ಟ್ರಪತಿ ಯಾರಾಗಲಿದ್ದಾರೆ ಎನ್ನುವುದು ತಿಳಿಯಲಿದೆ.
ಉಪ ರಾಷ್ಟ್ರಪತಿ ಸ್ಥಾನದ ಚುನಾವಣೆಯಲ್ಲಿ ಮತದಾನ (ಬೆ.10ಗಂಟೆ) ಆರಂಭವಾಗುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲು ಮತ ಚಲಾಯಿಸಿದರು. ಸಂಜೆ 5ಗಂಟೆವರೆಗೆ ಮತದಾನ ನಡೆಯಲಿದೆ.
ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ರಾಧಾಕೃಷ್ಣನ್ ಹಾಗೂ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಬಿ.ಸುದರ್ಶನ್ ರೆಡ್ಡಿ ಇವರಲ್ಲಿ ಯಾರಿಗೆ ಉಪರಾಷ್ಟ್ರಪತಿ ಹುದ್ದೆ ಲಭಿಸಲಿದೆ ಫಲಿತಾಂಶದಲ್ಲಿ ತಿಳಿಯಲಿದೆ.