ನವ ದೆಹಲಿ : ನಾಳೆ (ಮಂಗಳವಾರ, ಸೆ. 09) ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ.
ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಹಾಗೂ ಇಂಡಿಯಾ ಮೈತ್ರಿಕೂಟ ಅಭ್ಯರ್ಥಿ ಬಿ.ಸುದರ್ಶನ್ ರೆಡ್ಡಿ ನಡುವೆ ನೇರ ಹಣಾಹಣಿಗೆ ವೇದಿಕೆ ಸಿದ್ಧವಾಗಿದೆ.
ಜಗದೀಪ್ ಧನಕರ್ ಅವರ ದಿಢೀರ್ ರಾಜೀನಾಮೆಯಿಂದಾಗಿ ಎದುರಾದ ಈ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ ಸ್ಪಷ್ಟ ಮುನ್ನಡೆ ಲಭಿಸಬೇಕಿರುವುದು ಅನಿವಾರ್ಯವಾಗಿದೆ. ಚುನಾವಣೆ ರಹಸ್ಯ ಮತದಾನದ ಮೂಲಕ ನಡೆಯಲಿದೆ.
ಸಂಸತ್ತಿನ ಉಭಯ ಸದನಗಳ(ಲೋಕಸಭಾ ಹಾಗೂ ರಾಜ್ಯಸಭೆ) ಸದಸ್ಯರು ನಾಳೆ(ಮಂಗಳವಾರ) ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಸಂಸತ್ ಭವನದಲ್ಲಿ ನಡೆಯಲಿರುವ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ತಮ್ಮ ರಹಸ್ಯ ಮತದಾನ ಮಾಡಲಿದ್ದಾರೆ. ನಾಳೆ ಸಂಜೆಯೇ ಮತ ಎಣಿಕೆ ಆರಂಭವಾಗಿ, ನಾಳೆ ರಾತ್ರಿಯೇ ಫಲಿತಾಂಶ ಪ್ರಕಟವಾಗಲಿದೆ. ಸಂಜೆ ಸುಮಾರು 6 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ ಎಂದು ತಿಳಿದು ಬಂದಿದೆ.