ಬೆಂಗಳೂರು: ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಹತ್ಯೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆಡಿಯೋ ಸ್ಫೋಟಗೊಂಡಿದೆ. ಸದ್ಯ ಪುಷ್ಪ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿಚಾರಣೆ ನಡೆಸುವುದಕ್ಕಾಗಿ ಪುಷ್ಪ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪುಷ್ಪ ಜೊತೆ ಮತ್ತಿಬ್ಬರು ಯುವಕರನ್ನು ಕೂಡ ವಶಕ್ಕೆ ಪಡೆಯಲಾಗಿದೆ. ಹತ್ಯೆ ಸುಪಾರಿಗೆ ಸಂಬಂಧಿಸಿದಂತೆ ಪೊಲೀಸರು ಶಂಕಿತರನ್ನು ವಶಕ್ಕೆ ಪಡೆಯುತ್ತಿದ್ದಾರೆ. ಈ ಕುರಿತು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆಂಬುವುದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಷ್ಪ ಎಂಬುವವರು ರಾಕಿ ಎಂಬಾತನೊಂದಿಗೆ ಮಾತನಾಡಿರುವ ಆಡಿಯೋ ವೈರಲ್ ಆಗಿತ್ತು. ಇದೇ ಆಡಿಯೋ ಆಧಾರವಾಗಿಟ್ಟುಕೊಂಡು ಶಾಸಕರು ದೂರು ನೀಡಿದ್ದರು. ಹೀಗಾಗಿ ಆಡಿಯೋದಲ್ಲಿ ಮಾತನಾಡಿರುವ ಪುಷ್ಪಾಳನ್ನು ಈಗ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.