ಕೊಲೆ ಆರೋಪಿ ದರ್ಶನ್ ಗೆ ಕೊನೆಗೂ ಬೇಲ್ ಸಿಕ್ಕಿದೆ. ಹೀಗಾಗಿ ಇಷ್ಟು ದಿನಗಳ ಕಾಲ ದರ್ಶನ್ ಪರವಾಗಿ ನಿಂತಿದ್ದು ಅವರ ಪತ್ನಿ ವಿಜಯಲಕ್ಷ್ಮೀ. ನಿರಂತರವಾಗಿ ರ್ಶನ್ ಪರ ಹೋರಾಡತ್ತಲೇ ಇದ್ದರು. ಟೆಂಪಲ್ ರನ್ ನಡೆಸಿದ್ದರು. ಸದ್ಯ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ದೇವಿಗೆ ಧನ್ಯವಾದ ಅರ್ಪಿಸಿದ್ದಾರೆ.
ದರ್ಶನ್ ಗೆ 6 ವಾರಗಳ ಷರತ್ತು ಬದ್ಧ ಜಾಮೀನು ಸಿಗುತ್ತಿದ್ದಂತೆ ಪತ್ನಿ ವಿಜಯಲಕ್ಷ್ಮೀ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಒಂದನ್ನು ಮಾಡಿದ್ದಾರೆ. ಕಾಮಕ್ಯ ದೇವಸ್ಥಾನದ ಫೋಟೋ ಹಾಕಿ ಕೃತಜ್ಞತೆ ಸಲ್ಲಿಸಿದ್ದಾರೆ. ದೇವಿ ಆಶೀರ್ವಾದಿಂದ ಬೇಲ್ ಸಿಕ್ಕಿದೆ ಎಂದು ದೇವಿಗೆ ಧನ್ಯವಾದ ಅರ್ಪಿಸಿದ್ದಾರೆ.
ದರ್ಶನ್ ಅವರು ಇಂದೇ ಬಿಡುಗಡೆ ಆಗೋ ಸಾಧ್ಯತೆ ಇದೆ. ದರ್ಶನ್ ಹೊರಕ್ಕೆ ಬಂದ ಬಳಿಕ ಅವರನ್ನು ಕರೆದುಕೊಂಡು ಬರಲು ವಿಜಯಲಕ್ಷ್ಮಿ ತೆರಳುವ ಸಾಧ್ಯತೆ ಇದೆ. ದರ್ಶನ್ ಅವರು ಮೊದಲು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ. ಆನಂತರ ಅವರು ವೈದ್ಯಕೀಯ ಚಿಕಿತ್ಸೆ ಪಡೆಯಬಹುದು.
ಕೆಲವು ವಾರಗಳಿಂದ ದರ್ಶನ್ ಅವರು ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಅವರು ಸಂಪೂರ್ಣ ಚೇತರಿಕೆ ಕಾಣಲಿ ಎಂದು ಫ್ಯಾನ್ಸ್ ಬಯಸುತ್ತಿದ್ದರು. ಈಗ ವೈದ್ಯಕೀಯ ಗ್ರೌಂಡ್ಸ್ನಲ್ಲಿಯೇ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಸದ್ಯ ಪಾಸ್ಪೋರ್ಟ್ನ ಕೋರ್ಟ್ಗೆ ಸಲ್ಲಿಕೆ ಮಾಡುವಂತೆ ನ್ಯಾಯಮೂರ್ತಿ ಸೂಚಿಸಿದ್ದಾರೆ. ಎಲ್ಲ ಪ್ರಕ್ರಿಯೆ ಮುಗಿದ ಮೇಲೆ ದರ್ಶನ್ ಜಾಮೀನಿನ ಮೇಲೆ ಹೊರ ಬರಬಹುದು.