ದರ್ಶನ್ (Darshan) ಪತ್ನಿ ವಿಜಯಲಕ್ಷ್ಮಿ (Vijayalakshmi) ಅವರು ಇತ್ತೀಚೆಗೆ ಟೆಂಪಲ್ ರನ್ ನಲ್ಲಿ ಹೆಚ್ಚಾಗಿ ನಡೆಸುತ್ತಿದ್ದಾರೆ. ಈಗ ಅಸ್ಸಾಂನ ಗುವಾಹಟಿಯ ಕಾಮಾಕ್ಯ ದೇವಸ್ಥಾನಕ್ಕೆ (Kamakhya Temple) ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಹಿಂದೆ ದರ್ಶನ್, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಸಂದರ್ಭದಲ್ಲಿ ಕೂಡ ಕಾಮಾಕ್ಯ ದೇವಾಲಯಕ್ಕೆ ಭೇಟಿ ನೀಡಿದ್ದರು.
ವಿಜಯಲಕ್ಷ್ಮೀ ದೇವಸ್ಥಾನದಲ್ಲಿರುವ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.ವಿಜಯಲಕ್ಷ್ಮಿ ಅವರು ದೇವಿಯ ಆರಾಧಕಿ. ಆಗಾಗ ಶಕ್ತಿ ದೇವತೆಯ ಮೊರೆ ಹೋಗುತ್ತಾರೆ. ಅಸ್ಸಾಂನ ಗುವಾಹಟಿಯ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.