ಉಡುಪಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲಿನಲ್ಲಿ ಮುದ್ದೆ ಮುರಿಯುತ್ತಿದ್ದಾರೆ. ಈ ಮಧ್ಯೆ ಪತ್ನಿ ದೇವರ ಮೊರೆ ಹೋಗಿದ್ದಾರೆ.
ಜೈಲೂಟ ಸರಿಯಾಗುತ್ತಿಲ್ಲ. ಆರೋಗ್ಯಕ್ಕೆ ಒಗ್ಗುತ್ತಿಲ್ಲ ಎಂದು ದರ್ಶನ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಮನೆಯೂಟ ನೀಡಲು ಒಪ್ಪಿಗೆ ಸೂಚಿಸಿಲ್ಲ. ಹೀಗಾಗಿ ಎಷ್ಟೇ ಶ್ರೀಮಂತಿಕೆ ಇದ್ದರೂ ತಪ್ಪಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿ ಎನ್ನುವಂತೆ ದರ್ಶನ್ ಜೈಲೂಟಕ್ಕೆ ಒಗ್ಗಿಕೊಳ್ಳಬೇಕಿದೆ.
ಪತಿಯನ್ನು ಹೇಗಾದರೂ ಮಾಡಿ ಕೇಸ್ ನಿಂದ ಪಾರು ಮಾಡಬೇಕೆಂದು ಪಣತೊಟ್ಟಿರುವ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದಿದ್ದಾರೆ.
ಆಪ್ತರ ಜೊತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ತೆರಳಿ ತಾಯಿಯ ದರ್ಶನ ಪಡೆದು, ಪತಿಯನ್ನು ಪಾರು ಮಾಡುವಂತೆ ಪ್ರಾರ್ಥಿಸಿದ್ದಾರೆ.
ಅಲ್ಲದೇ, ವಿಜಯಲಕ್ಷ್ಮಿ ನವ ಚಂಡಿಕಾ ಹೋಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಸಂಕಲ್ಪ, ಪಾರಾಯಣದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ. ದೇವಸ್ಥಾನದಲ್ಲಿ ನಾಳೆ ಬೆಳಗ್ಗೆ ನವ ಚಂಡಿಕಾ ಹೋಮ ನಡೆಯಲಿದೆ.