ನಟಿ ರಮ್ಯಾ ಸೋಶಿಯಲ್ ಮೀಡಿಯಾದಲ್ಲಿ ರೇಣುಕಾಸ್ವಾಮಿ ಪ್ರಕರಣದ ಆರೋಪಿ, ನಟ ದರ್ಶನ್ ಅಭಿಮಾನಿಗಳ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.
ಡೆವಿಲ್ ನಟನ ಅಭಿಮಾನಿಗಳ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ರಮ್ಯಾ ಸಿದ್ಧತೆ ಮಾಡಿಕೊಳ್ಳುತ್ತಿರುವ ಹೊತ್ತಲ್ಲೇ ಕಾಟೇರನ ಪತ್ನಿ ವಿಜಯಲಕ್ಷ್ಮೀ ಎಂಟ್ರಿ ಕೊಡುವ ಸಾಧ್ಯತೆಗಳಿವೆ. ಈ ಮೂಲಕ ಪ್ರಕರಣ ಹೊಸ ತಿರುವು ಪಡೆದುಕೊಳ್ಳಲಿದೆ. ಸ್ಯಾಂಡಲ್‌ವುಡ್ ಪದ್ಮಾವತಿ ವಿರುದ್ಧ ವಿಜಯಲಕ್ಷ್ಮೀ ದರ್ಶನ್ ಮುಂದಾಗಿದ್ದಾರೆ ಎನ್ನಲಾಗ್ತಿದೆ.
ರೇಣುಕಾಸ್ವಾಮಿಗೆ ನ್ಯಾಯ ಸಿಗಬೇಕು ಎಂದು ರಮ್ಯಾ ಪೋಸ್ಟ್ ಮಾಡಿದ್ದು ಸರಿಯಲ್ಲ. ಪ್ರಕರಣ ನ್ಯಾಯಾಲದಲ್ಲಿರುವಾಗ ಏಕಪಕ್ಷೀಯ ಅಭಿಪ್ರಾಯ ಸರಿಯಲ್ಲ. ಹೀಗಾಗಿ ನಟಿ ರಮ್ಯಾ ವಿರುದ್ಧ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಲು ವಿಜಯಲಕ್ಷ್ಮೀ ಮುಂದಾಗಿದ್ದಾರೆ.